
ಕಾರವಾರ, ಉತ್ತರಕನ್ನಡ (ಮಾ.6): ಅಪ್ರಾಪ್ತ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗಿರೀಶ್ ದುರ್ಗಪ್ಪ ಭೋವಿ (20) ಬಂಧಿತ ಆರೋಪಿ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಸಂತ್ರಸ್ತೆ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಆರೋಪಿಯ ಕೃತ್ಯಕ್ಕೆ ವಿರೋಧ ವ್ಯಕ್ತಪಡಿಸಿರುವ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತೆಗೆ ಬೆದರಿಕೆಯೊಡ್ಡಿದ್ದನೆಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಅತ್ಯಾಚಾರ ದೂರು ಕೊಡಲು ಬಂದ ಅಪ್ರಾಪ್ತೆಯನ್ನು, ಮತ್ತೆರಡು ಬಾರಿ ರೇಪ್ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್!
ಆರೋಪಿಯ ಬೆದರಿಕೆಯಿಂದ ಅತ್ಯಾಚಾರ ನಡೆದ ಮನೆಯಲ್ಲಿ ತಿಳಿಸದೇ ಮುಚ್ಚಿಟ್ಟಿದ್ದ ಸಂತ್ರಸ್ತೆ ಯುವತಿ. ನಿನ್ನೆ ಬುಧವಾರ ಆಪ್ತಾಪ್ತೆಗೆ ದಿಡೀರ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಪಾಲಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿಯಾಗಿರೋ ವಿಚಾರ ಬೆಳಕಿಗೆ ಬಂದಿದೆ. ಶಾಲೆಗೆ ಹೋಗುವ ಮಗಳು ಗರ್ಭಿಣಿಯಾದ ಸುದ್ದಿ ಕೇಳಿ ಪೋಷಕರು ಶಾಕ್ ಆಗಿದ್ದಾರೆ.
ಪೊಲೀಸರಿಗೆ ಮಾಹಿತಿ ನೀಡಿದ ವೈದ್ಯರು:
ತಪಾಸಣೆ ವೇಳೆ ಅಪ್ರಾಪ್ತ ವಿದ್ಯಾರ್ಥಿ ಗರ್ಭಿಣಿಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ವೈದ್ಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ ವಿದ್ಯಾರ್ಥಿನಿಗೆ ಹೆರಿಗೆ ಮಾಡಿದ್ದಾರೆ. ಅಪ್ರಾಪ್ತ ಯುವತಿಗೆ ಹೆಣ್ಣು ಮಗು ಜನಿಸಿದ್ದು, ಆ ಮಗುವಿಗೆ ಉಸಿರಾಟ ತೊಂದರೆ ಎದುರಾಗಿತ್ತು. ಮಗುವಿಗೆ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ