
ಇತ್ತೀಚಿನ ದಿನಗಳಲ್ಲಿ ಮಕ್ಕಳು ಕೂಡ ವೈಯಕ್ತಿಕವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಆದರೆ, ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸುವಾಗ ಯಾರು ವಂಚಕರು ಎಂಬುದನ್ನು ಅರಿಯಲಾಗದೇ ಮೋಸಕ್ಕೆ ಒಳಗಾಗುತ್ತಾರೆ. ಇಲ್ಲೊಬ್ಬ ಕರ್ನಾಟಕದ ಯುವಕ, ಕೇರಳದ 13 ವರ್ಷದ ಬಾಲಕಿಯನ್ನು ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯ ಮಾಡಿಕೊಂಡು, ಪ್ರೀತಿಸುವ ನಾಟಕ ಮಾಡಿದ್ದಾನೆ. ನಂತರ, ಬಾಲಕಿಯನ್ನು ಭೇಟಿ ಮಾಡುವುದಕ್ಕೆಂದು ತೆರಳಿ, ಅಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾ*ರ ಎಸಗಿದ್ದಾನೆ.
ಈ ಘಟನೆ ಕೇರಳದ ಕೋಝಿಕ್ಕೋಡ್ ಕೊಯಿಲಾಂಡಿ ಬಳಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕರ್ನಾಟಕ ಮೂಲದ ಯುವಕನನ್ನು ಬಂಧಿಸಲಾಗಿದೆ. ಕರ್ನಾಟಕದ ಮೊಹಮ್ಮದ್ ಸಹೀರ್ ಯೂಸುಫ್ ಎಂಬಾತನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯವಾದ ಬಾಲಕಿಗೆ ಪ್ರೇಮದ ನಾಟಕವಾಡಿ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಬರ್ ಸೆಲ್ ನೆರವು ಮತ್ತು ಹಲವು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ವಡಕರ ಡಿವೈಎಸ್ಪಿ ಹರಿಪ್ರಸಾದ್ ನೇತೃತ್ವದಲ್ಲಿ ಕೊಯಿಲಾಂಡಿ ಸಿಐ ಶ್ರೀಲಾಲ್, ಎಸ್‌ಐ ಬಿಜು, ಎಎಸ್‌ಐ ವಿಜು, ಶೋಭಾ, ಸಿವಿಲ್ ಪೊಲೀಸ್ ಅಧಿಕಾರಿಗಳಾದ ನಿಖಿಲ್, ಪ್ರವೀಣ್ ಕುಮಾರ್, ಗಂಗೆಶ್ ಮುಂತಾದವರ ತಂಡ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಮೊಹಮ್ಮದ್ ಸಹೀರ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ