
ಉತ್ತರ ಕನ್ನಡ (ಜು.17):ಕುಡಿದ ಮತ್ತಿನಲ್ಲಿ ಹಣಕಾಸಿನ ವಿಚಾರಕ್ಕೆ ಮಾತಿಗೆ ಮಾತು ಬೆಳೆಸಿ ಸ್ನೇಹಿತನಿಗೆ ಚಾಕು ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಶ್ರೀದೇವಿ (ಯಲ್ಲಮ್ಮಾ ಬಾರ್) ವೈನ್ ಶಾಪ್‌ನಲ್ಲಿ ನಡೆದಿದೆ.
ಈ ಘಟನೆಯಲ್ಲಿ ಸಾದಿಕ್ (ಸದ್ದಾಮ್) ಬಾಷಾ ಖಾನ್ (34) ಎಂಬ ಯುವಕ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ. ಆರೋಪಿಯಾಗಿರುವ ಸಮೀವುಲ್ಲಾ ಸೋಹೆಲ್ ಬೇಪಾರಿ (27) ಚಾಕು ಇರಿದಿರುವ ಆರೋಪಿಯಾಗಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ, ಗಾಯಾಳು ಸಾದಿಕ್ ಮತ್ತು ಆರೋಪಿ ಸಮೀವುಲ್ಲಾ ಇಬ್ಬರೂ ಕ್ರಿಮಿನಲ್ ಹಿನ್ನೆಲೆಯುಳ್ಳ ರೌಡಿ ಶೀಟರ್‌ಗಳಾಗಿದ್ದು, ಹಳಿಯಾಳ ಠಾಣೆಯಲ್ಲಿ ಎಂಓಬಿ (ಮಾದರಿ ಗುನ್ನೆಗಾರ) ಆಗಿ ದಾಖಲಾಗಿದ್ದಾರೆ. ಘಟನೆಯ ದಿನ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸುವ ವೇಳೆ ಇಬ್ಬರ ನಡುವೆ ಹಣದ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಕುಡಿದ ಮತ್ತಿನಲ್ಲಿದ್ದ ಸಮೀವುಲ್ಲಾ, ಸಾದಿಕ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಹಳಿಯಾಳ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಸಮೀವುಲ್ಲಾನನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಾದಿಕ್‌ನನ್ನು ತಕ್ಷಣ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವನ ಪರಿಸ್ಥಿತಿ ಚಿಂತಾಜನಕವಾಗಿರುವುದರಿಂದ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ