ಕಾರವಾರ: ಮೆಡಿಕಲ್ ವಿದ್ಯಾರ್ಥಿಗಳ ಬುಲೆಟ್ ಬೈಕ್ ಸ್ಕೂಟಿಗೆ ಡಿಕ್ಕಿ, ಮಗ ಕಣ್ಮುಂದೆ ಸಾವು, ತಾಯಿ ಗಂಭೀರ ಗಾಯ!

Published : Nov 13, 2025, 09:59 PM IST
Karwar road accident today

ಸಾರಾಂಶ

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ 15 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಯುವಕನ ತಾಯಿ ಹಾಗೂ ಬುಲೆಟ್ ಸವಾರರಾದ ಮೆಡಿಕಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರ ಉತ್ತರಕನ್ನಡ (ನ.13): ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಆರ್‌ಟಿಒ ಕಚೇರಿ ಬಳಿ ನಡೆದಿದೆ.

ತಲೆಗೆ ಗಂಭೀರ ಪೆಟ್ಟು, ಸ್ಥಳದಲ್ಲೇ ಯುವಕ ಸಾವು:

ಚಿರಂಜೀವಿ ಬ್ರಹ್ಮಾನಂದ ಕುಂಜಿ(15) ಮೃತ ದುರ್ದೈವಿ. ಮೂಲತಃ ಯಲ್ಲಾಪುರ ತಾಲೂಕಿನ ಇಡಗುಂದಿ ನಿವಾಸಿಗಳು. ತನ್ನ ತಾಯಿಯೊಂದಿಗೆ ಮಾಜಾಳಿಯ ಮನೆಯೊಂದರಲ್ಲಿ ಬಾಡಿಗೆಗಿದ್ದರು. ಇಂದು ಕಾರವಾರಕ್ಕೆ ಸ್ಕೂಟಿಯಲ್ಲಿ ಬರುತ್ತಿದ್ದಾಗ ಆರ್‌ಟಿಒ ಕಚೇರಿ ಬಳಿ ಹಿಂದಿನಿಂದ ಬಂದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಬುಲೆಟ್‌ ಬೈಕ್ ರಭಸವಾಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಿರಂಜೀವ ತಲೆ‌ ರಸ್ತೆಗೆ ಬಡಿದದ್ದರಿಂದ ತೀವ್ರ ರಕ್ತಸ್ರಾವದೊಂದಿಗೆ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸ್ಥಳೀಯ ಪ್ರಯಾಣಿಕರಿಂದ ಪೊಲೀಸರಿಗೆ ಮಾಹಿತಿ:

ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಳಿಕ ಆಂಬುಲೆನ್ಸ್ ಮೂಲಕ ಚಿರಂಜೀವಿ ಮೃತದೇಹ ಹಾಗೂ ಗಾಯಗೊಂಡ ತಾಯಿ, ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮೃತನ ತಾಯಿ ಹಾಗೂ ವಿದ್ಯಾರ್ಥಿಗಳನ್ನು ಗೋವಾದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!