
ಬೆಂಗಳೂರು(ಜು. 11) ಕೇರಳದ ಬಹುಕೋಟಿ ಚಿನ್ನ ಸ್ಮಗ್ಲಿಂಗ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ರನ್ನು ಎನ್ ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಭಾನುವಾರ ಕೇರಳದ ಕೊಚ್ಚಿಯ ಎನ್ ಐಎ ಕಚೇರಿಗೆ ಕರೆದೊಯ್ಯಲಿದ್ದಾರೆ.
ಕುಟುಂಬ ಸಮೇತ ವಶಕ್ಕೆ ಪಡೆದು ಕರೆದೊಯ್ಯಲಾಗುತ್ತಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್ ಬ್ಯಾಗೇಜ್'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ಸರ್ಕಾರಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಹೇಳಲಾಗಿತ್ತು.
ಉತ್ತರ ಪ್ರದೇಶದಲ್ಲಿ ಮಾತನಾಡುತ್ತಿರುವ ಪೊಲೀಸ್ ರಿವಾಲ್ವಾರ್ ಗಳು
ಸರಿತ್, ಸ್ವಪ್ನ ಪ್ರಭ ಸುರೇಶ್, ಫೈಜಲ್ ಫರೀದ್ ಮತ್ತು ಸಂದೀಪ್ ನಾಯರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೇರಳ ಸರ್ಕಾರದ ಮಾಹಿತಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಸ್ವಪ್ನ ಸುರೇಶ್ ಕೆಲಸ ಮಾಡುತ್ತಿದ್ದರು. ಯುಎಇ ರಾಯಭಾರ ಕಚೇರಿಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಸರಿತ್ ಕುಮಾರ್ ಬಂಧನ ಮಾಡಿದಾಗ ಅನೇಕರ ಹೆಸರುಗಳು ಹೊರಗೆ ಬಂದಿದ್ದವು. ಈಗಾಗಲೇ ಕೇರಳಾದಲ್ಲಿ ಸರಿತ್ ಕುಮಾರ್ ಬಂಧಿಸಿದ್ದ ಎನ್ ಐಎ ಹೆಚ್ಚಿನ ತನಿಖೆ ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ