* ಹೆಂಡತಿಯನ್ನು ದಾರುಣ ಹತ್ಯೆ ಮಾಡಿದ ಗಂಡ
* 10 ಸಾವಿರ ಕೊಟ್ಟು 2 ಹಾವು ಖರೀದಿಸಿದ್ದ
* ಪ್ರಕರಣವನ್ನು ಮರುಸೃಷ್ಟಿ ಮಾಡಿದ ಪೊಲೀಸರು
* ತನಿಖೆಯ ಹಂತಗಳು ಹೀಗೂ ಇರುತ್ತವೆ
ಕೋಲಂ (ಆ.26 ) ಸರ್ಪದಿಂದ ಕಚ್ಚಿಸಿ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣದ ತನಿಖೆ ಕೇರಳದಲ್ಲಿ ನಡೆಯುತ್ತಿದೆ. ಪೊಲೀಸರು ಈಗ ಪ್ರಕರಣವನ್ನು ಮರುಸೃಷ್ಟಿ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಅವರು ಮಾಡಿರುವ ಪ್ರಯೋಗವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.
ಸೂರಜ್ ಎಂಬಾತನನ್ನು ಹೆಂಡತಿ ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.. ಹಾವನ್ನು ಬಳಸಿ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ ಆರೋಪ ಸೂರಜ್ ಮೇಲಿತ್ತು. ಹಾವನ್ನು ತೆಗೆದುಕೊಂಡ ಬಂದ್ ಜಾರ್ ಪತ್ತೆ ಮಾಡಲಾಗಿದ್ದು ಪೋರೆನ್ಸಿಕ್ ಲ್ಯಾಬ್ ಗೆ ಕಳುಹಿಸಿಕೊಡಲಾಗಿತ್ತು. .
ಮಿಲನದ ಬಳಿಕ ಸಂಗಾತಿಯನ್ನೇ ತಿನ್ನುವ ಕಾಳಿಂಗ, ಕಾರಣ ಏನು?
ಹಾವು ಕಚ್ಚಿ ಮೇ 7 ರಂದು ಉತ್ರಾ ಸಾವನ್ನಪ್ಪಿದ್ದರು. ಇದಾದ ಮೇಲೆ ಪೊಲೀಸರು ವಿಚಾರಣೆ ನಡೆಸಿದಾಗ ಹೆಂಡತಿಯನ್ನು ಕೊಲೆ ಮಾಡಿದ್ದಾಗಿ ಸೂರಜ್ ಒಪ್ಪಿಕೊಂಡಿದ್ದ. 10 ಸಾವಿರ ರೂ. ಕೊಟ್ಟು ಎರಡು ಹಾವು ತಂದಿದ್ದಾಗಿಯೂ ಹೇಳಿದ್ದ. ಮೇ 2 ರಂದೇ ಕೊಲೆ ಮಾಡಲು ಯತ್ನ ಮಾಡಿದ್ದ ಆದರೆ ಹಾವು ಕೈಕೊಟ್ಟಿತ್ತು.
ಮಹಿಳೆಯನ್ನು ಹೋಲುವ ಡಮ್ಮಿ ಬೊಂಬೆಯೊಂದನ್ನು ಬಳಸಿ ಅದಕ್ಕೆ ಹಾವಿನಿಂದ ಕಚ್ಚಿಸಲಾಗಿದೆ. ಹಾವು ಮಹಿಳೆಯ ಗೊಂಬೆಗೆ ಕಚ್ಚಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ? ಯಾವ ಕಾರಣಕ್ಕೆ ಕಚ್ಚುತ್ತದೆ? ಹಾವಿನ ವರ್ತನೆ ಹೇಗಿರುತ್ತದೆ? ಒಂದು ವೇಳೆ ಕಚ್ಚಿದರೆ ವಿಷ ಏರಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬ ಎಲ್ಲ ಅಂಶಗಳನ್ನು ಅಧಿಕಾರಿಗಳು ಸಂಗ್ರಹ ಮಾಡಿಕೊಂಡಿದ್ದಾರೆ.
If you don't like snakes, don't watch. Kerala police tried to reconstruct Uthra’s murder using a live cobra and a dummy. This is the video pic.twitter.com/C8XPTy1m3y
— Dhanya Rajendran (@dhanyarajendran)If you don't like snakes, don't watch. Kerala police tried to reconstruct Uthra’s murder using a live cobra and a dummy pic.twitter.com/NNwkSicbIi
— Dhanya Rajendran (@dhanyarajendran)