
ನವದೆಹಲಿ (ಏಪ್ರಿಲ್ 5, 2023): ಕೇರಳದ ಕೋಳಿಕ್ಕೋಡ್ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ಶಂಕಿತನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಎಟಿಎಸ್ ಮತ್ತು ಕೇರಳ ಪೊಲೀಸರ ಜಂಟಿ ತಂಡವು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದೆ. ಆರೋಪಿಯನ್ನು 24 ವರ್ಷದ ಶಾರುಖ್ ಸೈಫಿ ಎಂದು ಗುರುತಿಸಲಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಮುಖ್ಯ ಕಾರ್ಯನಿರ್ವಾಹಕ ಎಕ್ಸ್‌ಪ್ರೆಸ್ ರೈಲಿನ ಡಿ 1 ಕೋಚ್‌ನೊಳಗೆ ಬೆಂಕಿ ಹಚ್ಚಿದ ಆರೋಪವಿದೆ.
ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಯ ತನಿಖೆಗಾಗಿ ಮಂಗಳವಾರ 18 ಸದಸ್ಯರ ಎಸ್‌ಐಟಿ ಕೇರಳದ ಕೋಳಿಕ್ಕೋಡ್‌ನಲ್ಲಿ ತನ್ನ ಮೊದಲ ಸಭೆ ನಡೆಸಿತ್ತು. ಅಲ್ಲದೆ, ಈ ಬಗ್ಗೆ ಸಭೆಯ ನಂತರ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಸಮಗ್ರ ತನಿಖೆ ನಡೆಯುತ್ತಿದೆ ಮತ್ತು ತಂಡದ ಪ್ರತಿಯೊಬ್ಬ ಸದಸ್ಯರಿಗೆ ಕಾರ್ಯಗಳನ್ನು ನಿಯೋಜಿಸಲಾಗಿದೆ. ಸಭೆಯು ತನಿಖೆಯ ಹಾದಿಯನ್ನು ರೂಪಿಸಿದೆ’’ ಎಂದೂ ಹೇಳಿದ್ದರು.ಹಾಗೆ, ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ವಿಚಾರಣೆಯ ನಂತರವೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಬಹುದು ಎಂದು ಅವರು ಹೇಳಿದರು.
ಇದನ್ನು ಓದಿ: ಕೇರಳ ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ಆರೋಪಿ ಶಾರುಖ್ ಯುಪಿಗೆ ಪರಾರಿ
ಭಾನುವಾರ ರಾತ್ರಿ 9.30ರ ಸುಮಾರಿಗೆ ಕೇರಳದ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸ್‌ಪ್ರೆಸ್‌ನ ಡಿ 1 ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಕರ ಮೇಲೆ ದ್ರವವೊಂದನನ್ನು ಸಿಂಪಡಿಸಿ ನಂತರ ಆರೋಪಿ ಬೆಂಕಿ ಹಚ್ಚಿದ್ದ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಹಾರಿದ ನಂತರ ಒಂದು ಮಗು ಸೇರಿದಂತೆ ಮೂವರು ಪ್ರಯಾಣಿಕರು ಮೃತಪಟ್ಟಿದ್ದರು. ಅಲ್ಲದೆ, ಈ ವೇಳೆ 9 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ.
ಈ ಮಧ್ಯೆ, ಆಲಪ್ಪುಳ ಮತ್ತು ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಆರೋಪಿ, ಘಟನೆಯ ಬಳಿಕ ಕರ್ನಾಟಕದ ಮಂಗಳೂರು ಮುಖಾಂತರ ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸರ ತಂಡ ಉತ್ತರ ಪ್ರದೇಶಕ್ಕೆ ತಲುಪಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಕೇರಳ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದೂ ತಿಳಿದುಬಂದಿದೆ.
ಇದನ್ನೂ ಓದಿ: ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್ ಸಿಸ್ಟಮ್‌ನಲ್ಲಿ ಬಾಂಬ್..! ಸ್ಫೋಟಕ್ಕೆ ನವ ವಿವಾಹಿತ ಸೇರಿ ಇಬ್ಬರು ಬಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ