
ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು
ಮಂಗಳೂರು (ಜ.20): ಮಂಗಳೂರಿನಲ್ಲಿ ವೈದ್ಯರು ಮತ್ತು ವೈದ್ಯರ ಗಾಂಜಾ ಲೋಕ ಪ್ರಕರಣ ಸಂಬಂಧ ಮಂಗಳೂರಿನ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಕೊನೆಗೂ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ದ ಶಿಸ್ತು ಕ್ರಮ ಕೈಗೊಂಡಿದೆ. ಈ ಮೂಲಕ ನಮ್ಮ ಸಂಸ್ಥೆ ಡ್ರಗ್ಸ್ ವಿಚಾರದಲ್ಲಿ ಪೊಲೀಸರ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದೆ.
ಡ್ರಗ್ ಕೇಸ್(Drug case) ನಲ್ಲಿ ಸಿಕ್ಕಿ ಬಿದ್ದ ಇಬ್ಬರು ವೈದ್ಯರು(Doctors) ಹಾಗೂ ಏಳು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಇಬ್ಬರು ವೈದ್ಯರಿಗೆ ಕೆಎಂಸಿ ಆಸ್ಪತ್ರೆ(KMC Hospital)ಯಿಂದ ಗೇಟ್ ಪಾಸ್ ನೀಡಲಾಗಿದೆ. ಇಬ್ಬರು ವೈದ್ಯರನ್ನು ವಜಾ ಮಾಡಿ ಗುತ್ತಿಗೆ ರದ್ದುಪಡಿಸಿರುವ ಆಸ್ಪತ್ರೆ ಆಡಳಿತ ಮಂಡಳಿ ಸದ್ಯ ಕಠಿಣ ಕ್ರಮ ಕೈಗೊಂಡಿದೆ.
ಗಾಂಜಾ ಸೇವನೆ ಆರೋಪ: ಪೊಲೀಸರ ವಿಚಾರಣೆಯಿಂದ ಮನನೊಂದ ಯುವಕ ಆತ್ಮಹತ್ಯೆ
ಕೆಎಂಸಿ ಮೆಡಿಕಲ್ ಆಫೀಸರ್(KMC Medical Officer) ಆಗಿದ್ದ ಕೇರಳ ಮೂಲದ ವೈದ್ಯ ಡಾ.ಸಮೀರ್(Dr sameer)(32) ಮತ್ತು ಮೆಡಿಕಲ್ ಸರ್ಜನ್ ಆಗಿದ್ದ ತಮಿಳುನಾಡು ಮೂಲದ ಮಣಿಮಾರನ್(Manimaran) ಮುತ್ತು(28) ವಜಾ ಮಾಡಲಾಗಿದೆ. ಉಳಿದ ಏಳು ವೈದ್ಯಕೀಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ಅಮಾನತ್ತು ಮಾಡಲಾದ ಕೆಎಂಸಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು
ಮಂಗಳೂರು: ಗಾಂಜಾ ಕೇಸಲ್ಲಿ ಮತ್ತಿಬ್ಬರು ವೈದ್ಯರ ಬಂಧನ
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್(Commissioner of Police, Mangalore) ಗೆ ಕೆಎಂಸಿ ಡೀನ್ ಉನ್ನಿಕೃಷ್ಣನ್(KMC Dean B Unnikrishnan) ಮಾಹಿತಿ ನೀಡಿದ್ದು, ಮಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿ ಶಿಸ್ತು ಕ್ರಮ ತೆಗೆದುಕೊಂಡ ಬಗ್ಗೆ ಪತ್ರವನ್ನು ಡೀನ್ ಉನ್ನಿಕೃಷ್ಣನ್ ಕಮಿಷನರ್ ಗೆ ಹಸ್ತಾಂತರ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ