ನೇಣಿಗೆ ಶರಣಾದ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿ| ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು|
ಕೋಲಾರ(ಜೂ.22): ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ(ಕೋಚಿಮೂಲ್) ಉದ್ಯೋಗಿಯೊಬ್ಬರು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. 28 ವರ್ಷದ ದರ್ಶನ್ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಅಂಜನಾದ್ರಿ ಲಾಡ್ಜ್‌ನಲ್ಲಿ ದರ್ಶನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದರ್ಶನ್ ಕೋಲಾರದ ಕೋಚಿಮುಲ್‌ನಲ್ಲಿ ಪಶುವೈದ್ಯ ವಿಭಾಗದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಪದವಿ ಪರೀಕ್ಷೆ ನಡೆಯದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ದರ್ಶನ್ ಮೂಲತಃ ಚಿತ್ರದುರ್ಗ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ಕೋಚಿಮುಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪ್ರೇಮ ವೈಫಲ್ಯದಿಂದ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿರಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆಯಿಂದಷ್ಟೇ ದರ್ಶನ್ ಸಾವಿಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬರಲಿದೆ.