ಕೊಡಗು: ವಿಷ ಸೇವಿಸಿದ್ದ ಪೊಲೀಸ್ ಪೇದೆ ಚಿಕಿತ್ಸೆ ಫಲಿಸದೆ ಸಾವು! ವರ್ಗಾವಣೆ ಬಳಿಕ ಏನಾಯ್ತು?

Published : Feb 12, 2026, 10:12 AM IST
Kodagu Police Constable Dies After Failing to Respond to Medical Treatment

ಸಾರಾಂಶ

ಕೊಡಗು ಜಿಲ್ಲೆಯ ಪೊಲೀಸ್ ಪೇದೆ ಸಂದೀಪ್ ರೈ (42) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಮಡಿಕೇರಿಗೆ ವರ್ಗಾವಣೆಗೊಂಡಿದ್ದ ಅವರು, ಕೆಲವು ತಿಂಗಳುಗಳಿಂದ ಕರ್ತವ್ಯಕ್ಕೆ ಗೈರಾಗಿದ್ದರು. ಹತ್ತು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಕೊಡಗು (ಫೆ.12): ಕರ್ತವ್ಯಕ್ಕೆ ಗೈರಾಗಿದ್ದ ಪೊಲೀಸ್ ಪೇದೆಯೊಬ್ಬರು ವಿಷ ಸೇವಿಸಿ ಆತ್ಮ೧ಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕಳೆದ ಹತ್ತು ದಿನಗಳಿಂದ ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಪೇದೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತ ಪೇದೆಯನ್ನು ಸಂದೀಪ್ ರೈ (42) ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ವರ್ಗಾವಣೆಯಾದ ಬಳಿಕ ಅವರು ವೃತ್ತಿಜೀವನದಲ್ಲಿ ಅಸ್ಥಿರತೆ ಅನುಭವಿಸುತ್ತಿದ್ದರೇ ಎಂಬ ಅನುಮಾನಗಳು ಮೂಡಿವೆ.

ಕರ್ತವ್ಯಕ್ಕೆ ಗೈರು

ಕಳೆದ ಕೆಲ ತಿಂಗಳಿಂದ ಸಂದೀಪ್ ರೈ ಅವರು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಮಾನಸಿಕ ಒತ್ತಡ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಅವರು ಕೆಲಸದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಇದೇ ಹತಾಶೆಯಲ್ಲಿ ಕಳೆದ 10 ದಿನಗಳ ಹಿಂದೆ ಸಂದೀಪ್ ರೈ ಅವರು ವಿಷ ಸೇವಿಸಿ ಆತ್ಮ೧ಹತ್ಯೆಗೆ ಯತ್ನಿಸಿದ್ದರು.

ಚಿಕಿತ್ಸೆ ಫಲಿಸದೆ ಕೊನೆಯುಸಿರು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಸಂದೀಪ್ ರೈ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಪೇದೆಯ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳಲ್ಲಿ ಮೌನ ಆವರಿಸಿದೆ.

ಗಮನಿಸಿ:

ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ). ಇದೆ ಸಂಪರ್ಕಿಸಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೀದರ್: ಫೇಸ್‌ಬುಕ್ ಲೈವ್‌ನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ; ಯುವಕನ ಬಂಧನಕ್ಕೆ ಠಾಣೆ ಮುಂದೆ ಪ್ರತಿಭಟನೆ
ಮದುವೆ ಮನೆಗೆ ನುಗ್ಗಿ ₹10000ಕ್ಕೆ ಮಂಗಳಮುಖಿಯರಿಂದ ಬೇಡಿಕೆ, ಏನಿದು ರಂಪಾಟ, ಇವರಿಗೆ ಪೊಲೀಸ್, ಕಾನೂನು ಅನ್ವಯ ಆಗಲ್ವೇ?