ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಆರ್‌ ಪುರಂ ಠಾಣೆ ಇನ್ಸ್‌ಪೆಕ್ಟರ್‌, ಪಿಎಸ್‌ಐ!

By Kannadaprabha News  |  First Published Mar 14, 2024, 7:56 PM IST

ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ.


ಬೆಂಗಳೂರು (ಮಾ.14) : ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ. ಪೊಲೀಸರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

Latest Videos

undefined

ಕೇರಳ ಸ್ಟೋರಿ ಬಳಿಕ ಲೋಕಸಭಾ ಚುನಾವಣೆ ಹೊತ್ತಲ್ಲಿ ಮೆಹಬೂಬ ತೆರೆಗೆ, ಮುಸ್ಲಿಮರ ಆಕ್ರೋಶ!

ಇನ್ಸ್ ಪೆಕ್ಟರ್ ವಜ್ರಮುನಿ, ಪಿಎಸ್ಐ ರಮ್ಯಾ ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಯ ಬಿಡುಗಡೆಗಾಗಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮುಂಗಡವಾಗಿ 50,000 ರೂಪಾಯಿ ಲಂಚ ಪಡೆದುಕೊಂಡಿದ್ದರು. ಇಂದು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಒಂದೇ ತಿಂಗಳಲ್ಲಿ 200 ಸ್ವತ್ತುಗಳಿಗೆ ಅಕ್ರಮವಾಗಿ ಎ ಖಾತಾ; ಲೋಕಾಯುಕ್ತರಿಗೆ ದೂರು ನೀಡಿದ ಎನ್‌ಆರ್ ರಮೇಶ್

click me!