
ಕಾರವಾರ, ಉತ್ತರಕನ್ನಡ (ಅ.18): ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಬಳಿಯ ವಡ್ಡಿ ಘಾಟ್‌ನಲ್ಲಿ ನಡೆದಿದೆ.
ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳ್ಳಾರಿಯಿಂದ ಕುಮಟಾಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್‌ನಲ್ಲಿ 49 ಪ್ರಯಾಣಿಕರಿದ್ದರು ಭಾರೀ ಅನಾಹುತವೊಂದು ತಪ್ಪಿದೆ. ಈ ದುರ್ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 49 ಪ್ರಯಾಣಿಕರಿಗೆ ಗಾಯ ಗಾಯಗೊಂಡಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಅಂಕೋಲಾ ಠಾಣಾ ಪೊಲೀಸರು ತಕ್ಷಣ ಆಗಮಿಸಿ, ಗಾಯಾಳುಗಳನ್ನು ಅಂಕೋಲಾ ಹಾಗೂ ಕುಮಟಾ ಸರಕಾರಿ ಆಸ್ಪತ್ರೆಗಳಿಗೆ ರವಾನಿಸಿದರು. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆ ನೀಡಲಾಗಿದೆ.
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತವು ಹೇಗೆ ಸಂಭವಿಸಿತು ಹದಗೆಟ್ಟ ರಸ್ತೆಯೇ? ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ನಡೆಯಿತೇ ಪೊಲೀಸರ ಪರಿಶೀಲನೆ ಬಳಿಕ ತಿಳಿಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ