
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಜು.8): ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್ಆರ್ಟಿಸಿ ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ.
ಹೆಂಡತಿಯ ಕೊಂದು ಮೆದುಳು ತಿಂದ ಗಂಡ, ತಲೆಬುರುಡೆ ಸಿಗರೇಟ್ ಬೂದಿ ಹಾಕಲು ಬಳಕೆ!
ಈ ವೇಳೆ ಕಡೂರು ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ವೇಳೆ ನಾಲ್ವರು ಮಧ್ಯ ಸೇವಿಸಿದ್ದು, ಅದರ ಅಮಲಿನಲ್ಲಿದ್ದ ಪುಂಡರು ಬಸ್ಸಿನ ಗ್ಲಾಸ್ ಒಡೆಯುವುದರ ಜೊತೆಗೆ ಪ್ರಶ್ನೆ ಮಾಡಿದ ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.
3 ತಿಂಗಳ ಹಿಂದೆ ದೇವಸ್ಥಾನಕ್ಕೆ ಹೋದ ಗಂಡ-ಪುಟ್ಟ ಕಂದಮ್ಮ ನಾಪತ್ತೆ, ಮತ್ತೊಬ್ಬಾಕೆಯ ಜತೆ
ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೆಲ ಗಂಟೆಗಳಲ್ಲೇ ಪೊಲೀಸರು ಆರೋಪಿಗಳಾದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಇನ್ನು ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ