ತಲೆಯ ಮೇಲೆ ಕಲ್ಲು ಎತ್ತಿಹಾಕಿ KSRTC ಬಸ್ ಚಾಲಕನನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ.
ಕಲಬುರಗಿ (ಅ.13) :- ತಲೆಯ ಮೇಲೆ ಕಲ್ಲು ಎತ್ತಿಹಾಕಿ KSRTC ಬಸ್ ಚಾಲಕನನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ಸಿದನೂರು(Sidanooru) ಗ್ರಾಮದ ಶಿವಶರಣಪ್ಪ(Shivasharanappa) ಎನ್ನುವ 40 ವರ್ಷದ ವ್ಯಕ್ತಿಯೇ ಕೊಲೆಯಾದ ದುರ್ದೈವಿ.
ನಿನ್ನೆ ಡ್ಯೂಟಿ ಮುಗಿಸಿಕೊಂಡು ಮನೆಗೆ ಬಂದ ಶಿವಶರಣಪ್ಪ, ಸ್ನೇಹಿತರ ಜೊತೆ ಹೊರಗಡೆ ಹೋಗಿದ್ದ. ಆದರೆ ಬೆಳಗ್ಗೆ ಗ್ರಾಮದ ಹೊರವಲಯದ ಕಾಲುವೆಯ ಪಕ್ಕದಲ್ಲಿ ಶಿವಶರಣಪ್ಪನ ಶವ ಪತ್ತೆಯಾಗಿದೆ.ಮುಖ ಹಾಗೂ ಮೈಮೇಲೆ ಕೆಲವೆಡೆ ಚಾಕುವಿನಿಂದ ಇರಿದ ಗಾಯದ ಗುರುತುಗಳಿವೆ. ಅಂತಿಮವಾಗಿ ತಲೆಯ ಮೇಲೆ ದೊಡ್ಡ ಬಂಡೆಗಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಗೆ ಕಾರಣ ಏನು ಎನ್ನುವುದು ನಿಖರವಾಗಿ ತಿಳಿದುಬಂದಿಲ್ಲ. ಆದರೆ ಪಾರ್ಟಿ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರೇವೂರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಶಿವಶರಣಪ್ಪನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಫಜಲಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆಗೆ ಕಾರಣ ಏನು, ಕೊಲೆಗಾರರು ಯಾರು ಎನ್ನುವುದು ಪೋಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ಪತ್ನಿ ಮೇಲೆ ಕಣ್ಣು ಹಾಕಿದ ಗೆಳೆಯನ ಮರ್ಡರ್..!