Breaking: ಇಳಕಲ್‌ಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: 20 ಪ್ರಯಾಣಿಕರಿಗೆ ಗಾಯ

By Sathish Kumar KH  |  First Published Mar 26, 2023, 4:02 PM IST

ವಿಜಯಪುರದ ಚಡಚಣದಿಂದ ಇಳಕಲ್‌ಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಳಿಯ ತಗ್ಗು ಪ್ರದೇಶಕ್ಕೆ ಉರುಳಿಬಿದ್ದಿದೆ. 


ವಿಜಯಪುರ (ಮಾ.26): ವಿಜಯಪುರದ ಚಡಚಣದಿಂದ ಇಳಕಲ್‌ಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಳಿಯ ತಗ್ಗು ಪ್ರದೇಶಕ್ಕೆ ಉರುಳಿಬಿದ್ದಿದೆ. ಈ ಘಟನೆಯಿಂದ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ, ವಿಜಯಪುರ ತಾಲ್ಲೂಕಿನ ತಿಡಗುಂದಿ ಬಳಿ ಮಧ್ಯಾಹ್ನ ನಡೆದಿದೆ. ಈ ಘಟನೆಯಿಂದ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅದರಲ್ಲೂ ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಆದರೆ, ಬಸ್‌ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಆಗಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ ಚಡಚಣದಿಂದ ಇಳಕಲ್‌ಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ.

Tap to resize

Latest Videos

 

ಕಾರಿಗೆ ಡಿಕ್ಕಿ ಹೊಡೆದು ಕಾಂಪೌಂಡ್‌ಗೆ ಗುದ್ದಿದ್ದ ಕೇರಳ ಸಾರಿಗೆ ಬಸ್: ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು: ಇನ್ನು ಘಟನೆ ನಡೆದ ಕೂಡಲೇ ದಾರಿ ಇತರೆ ವಾಹನಗಳ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ, ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಬಸ್‌ ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ. ಮತ್ತೊಂದೆಡೆ ಆಂಬುಲೆನ್ಸ್‌ಗೆ ಕರೆ ಮಾಡಿದ್ದು, ಸ್ವಲ್ಪ ಸಮಯದಲ್ಲೇ ಬಂದ ಆಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ನೆರವಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಳೆದ ತಿಂಗಳು ಗದಗ- ಬೆಟಗೇರಿಯಲ್ಲಿ ಮಿನಿ ಬಸ್‌ ದುರಂತ: ಮದುವೆಯನ್ನು ಮುಗಿಸಿ ರಾತ್ರಿ ವೇಳೆ ಮರಳಿ ಮನೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಮಿನಿ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮೂವರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಟಗೇರಿ ಹೊರವಲಯದ ದಂಡಿನ ದುರಗಮ್ಮ ದೇವಸ್ಥಾನ ಬಳಿ ನಡೆದಿತ್ತು. ಬಾಗಲಕೋಟೆಯಿಂದ ಮದುವೆ ಮುಗಿಸಿದ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಬೆಟಗೇರಿ ಕಡೆಗೆ ಹೋಗುತ್ತಿತ್ತು. ಎದುರುಗಡೆಯಿಂದ ಗದಗ ನಗರದದಿಂದ ಹೊರಟ್ಟಿದ್ದ ಆಟೋ ನಡುವೆ ಅಪಘಾತವಾಗಿದೆ. ಎರಡೂ ವಾಹನಗಳು ವೇಗವಾಗಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಟೋದೊಳಗಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಗದಗ ಜಿಲ್ಲೆಯ ಬೆಟಗೇರಿ ಹೊರವಲಯದ ದಂಡಿನ ದುರಗಮ್ಮ ದೇವಸ್ಥಾನ ಬಳಿ ನಡೆದಿದೆ. ಉಳಿದಂತೆ ಆಟೋದಲ್ಲಿದ್ದ ಇತರರಿಗೂ ಗಂಭೀರ ಗಾಯಗಳಾಗಿವೆ. ಮಿನಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗಿನ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಗದಗದ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಸಾಫ್ಟ್‌ವೇರ್‌ ದಂಪತಿಯ ದುರಂತ ಅಂತ್ಯ: ಮದುವೆಗೆ ಹೊರಟಿದ್ದವರು ಮಸಣ ಸೇರಿದರು

ಗಾಯಾಳುಗಳು ಜಿಮ್ಸ್‌ ಆಸ್ಪತ್ರೆಗೆ ದಾಖಲು: ಮಿನಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೂವರು ಸಾವು ಪ್ರಕರಣದಲ್ಲಿ ಆಟೋದಲ್ಲಿದ್ದ ನರಸಾಪೂರದ ಸಯ್ಯದ್ ಅಲಿ(20) ಪ್ರದೀಪ್ (40) ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಟಗೇರಿಯ ಮಂಜುನಾಥ ನಗರದ ನಿವಾಸಿ ನಿಖಿಲ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದರು. ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಮಿನಿ ಬಸ್ ಹಾಗೂ ಆಟೋ ನಡುವೆ ನಡೆದಿದ್ದ ಅಪಘಾತದಿಂದ ತುಸು ಹೊತ್ತು ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಟ್ರಾಫಿಕ್‌ ನಿಯಂತ್ರಣ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

click me!