ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಠಾಟ್ ಮೂರ್ಚೆ, ಮರಕ್ಕೆ ಅಪ್ಪಳಿಸಿದ KSRTC ಬಸ್!

Published : Feb 09, 2025, 07:57 PM ISTUpdated : Feb 09, 2025, 08:04 PM IST
ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಠಾಟ್ ಮೂರ್ಚೆ, ಮರಕ್ಕೆ ಅಪ್ಪಳಿಸಿದ KSRTC ಬಸ್!

ಸಾರಾಂಶ

ಚಾಮರಾಜನಗರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನ ಚಾಲಕನಿಗೆ ಹಠಾತ್ ಮೂರ್ಛೆ ಬಂದ ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಹನೂರಿನಿಂದ ಮೈಸೂರಿಗೆ ತೆರಳುತ್ತಿತ್ತು.

ಚಾಮರಾಜನಗರ (ಫೆ.9): ಬಸ್‌ನಲ್ಲಿ ಯಾವುದೋ ಕಾರ್ಯಕ್ರಮಕ್ಕೆ ಊರಿಗೆ ಹೋಗುತ್ತಿರುವಾಗ, ಬಸ್ ಗಂಟೆಗೆ 60ಕಿಮೀ ವೇಗದಲ್ಲಿ ಚಲಿಸುತ್ತಿರುತ್ತದೆ ಈ ವೇಳೆ ಇದ್ದಕ್ಕಿದ್ದಂತೆ ಬಸ್ ಚಾಲಕನಿಗೆ ಹೃದಯಾಘಾತವೋ, ಅಪಸ್ಮಾರ ಬಂದರೆ ಹೇಗೆ? ಅಬ್ಬಾ ನೆನಸಿಕೊಂಡರೇನೆ ಅರ್ಧ ಜೀವ ಹೋದಂತಾಗುತ್ತಲ್ಲವೇ? ಅಂಥ ದುರ್ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಹೌದು ಬಸ್ ಚಾಲಯಿಸುತ್ತಿರುವಾಗಲೇ ಚಾಲಕನಿಗೆ ಮೂರ್ಚೆ ಬಂದ ಪರಿಣಾಮ ವೇಗದಲ್ಲಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದಲ್ಲಿ ನಡೆದಿದ್ದು, ದುರ್ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ. 

ಇದನ್ನೂ ಓದಿ: ಮಂಡ್ಯದಲ್ಲಿ KSRTC ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿತ್ತು. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಬರುತ್ತಲೇ ಬಸ್ ಚಾಲಕನಿಗೆ ಹಠಾತ್ ಮೂರ್ಚೆ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ವೇಗದಲ್ಲೇ ಅಡ್ಡಾದಿಡ್ಡಿ ಚಲಿಸಿ ಕೊನೆಗೆ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನುಜ್ಜುಗುಜ್ಜು ಆಗಿದೆ. ಮುಂಭಾಗದಲ್ಲಿ ಕುಳಿತಿದ್ದ ಐವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!