ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 7 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ್ ಬಳಿ ನಡೆದಿದೆ.
ಬೆಳಗಾವಿ (ಮೇ.24): ಜಮಖಂಡಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 7 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ್ ಬಳಿ ನಡೆದಿದೆ. ಬಸ್ ನಲ್ಲಿ 30 ಕ್ಕೂ ಅಧಿಕ ಪ್ರಯಾಣಿಕರಿದ್ದರು ಎಂದು ವರದಿ ತಿಳಿಸಿದೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ ಧಾರವಾಡದಿಂದ ಜಮಖಂಡಿಗೆ ಪ್ರಯಾಣಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭರ್ಜರಿ ಮದುವೆ ಊಟ ಮಾಡಿದವರಿಗೆ ವಾಂತಿ, ಬೇಧಿ: 50 ಜನರು ಆಸ್ಪತ್ರೆ ದಾಖಲು
ಅಪಘಾತ: ಬೈಕ್ ಸವಾರ ಸಾವು
ಮದ್ದೂರು: ರಸ್ತೆ ಬದಿ ಅಳವಡಿಸಿದ್ದ ಸೋಲಾರ್ ಪಿಲ್ಲರ್‌ಗೆ ದ್ವಿಚಕ್ರ ವಾಹನ ಡಿಕ್ಕಿಯೊಡೆದ ಪರಿಣಾಮ ಸವಾರ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನಿಡಘಟ್ಟಗ್ರಾಮದ ಬಳಿ ಭಾನುವಾರ ರಾತ್ರಿ ಜರುಗಿದೆ. ಬೆಂಗಳೂರು ನಗರದ ಬನಶಂಕರಿ ಬಡಾವಣೆಯ ನಿವಾಸಿ ಆನಂದ್ ಅವರ ಪುತ್ರ ಗೋವಿಂದರಾಜು(22) ಮೃತಪಟ್ಟವ್ಯಕ್ತಿಯಾಗಿದ್ದು, ಕತ್ರಿಗುಪ್ಪೆ ಬಡಾವಣೆಯ ರವಿಕುಮಾರ್ ಹಾಗೂ ಹರ್ಷ ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ. ಮೃತ ಗೋವಿಂದರಾಜು ಅವರ ದ್ವಿಚಕ್ರ ವಾಹನದಲ್ಲಿ ಸ್ನೇಹಿತರಾದ ರವಿಕುಮಾರ್ ಹಾಗೂ ಹರ್ಷ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಸವಾರನ ಅಜಾಗರೂಕತೆ ಮತ್ತು ಅತಿವೇಗವಾಗಿ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ ರಸ್ತೆಬದಿ ಅಳವಡಿಸಿದ್ದ ಪಿಲ್ಲರ್‌ಗೆ ಡಿಕ್ಕಿಯೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೋಸ ಹೋಗಬೇಡಿ, ಹಣ ಕೇಳಿ ನಿಮಗೂ ಬರಬಹುದು ಅವಧೂತ ವಿನಯ್ ಗುರೂಜಿ ಮೆಸೇಜ್!
ಡಿಕ್ಕಿಯೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಗೋವಿಂದರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ… ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.