
ಉಳ್ಳಾಲ(ಫೆ.11): ಕೆಎಸ್ಆರ್ಟಿಸಿ ನಿರ್ವಾಹಕ ರೈಲ್ವೇ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗೇರಿನಲ್ಲಿ ಬುಧವಾರ ನಡೆದಿದೆ.
ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಬಾಲಕೃಷ್ಣ ಮೃತರು. ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧಾರವಾಡ: ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
ಡೆತ್ ನೋಟ್‌ನಲ್ಲಿ ತನ್ನ ಸಹೋದರನ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು, ನನ್ನ ಮಕ್ಕಳು ಹಾಗೂ ತಾಯಿಯನ್ನು ಒಳ್ಳೆಯದರಲ್ಲಿ ನೋಡಿಕೊಳ್ಳಿ ಎಂದ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ರಾ.ಹೆ.66ರ ಅವಳಿ ಸೇತುವೆಗಳಲ್ಲಿ ಜನರು ನದಿಗೆ ಹಾರದಂತೆ ಸೇತುವೆಯ ಇಕ್ಕೆಲಗಳಿಗೆ ತಂತಿಯ ತಡೆಬೇಲಿ ಅಳವಡಿಸಿದ ಬಳಿಕ ಆ ಸೇತುವೆಯಿಂದ ನದಿಗೆ ಹಾರುವ ಪ್ರಕರಣಗಳು ನಿಂತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ