
ಚಿಕ್ಕೋಡಿ (ಜೂ.30): ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ರಸ್ತೆ ಮಧ್ಯೆದಲ್ಲೇ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ.
ಕುಡಚಿ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂಧಿತ ವ್ಯಕ್ತಿ. 2 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಟ್ಟುಹಬ್ಬ ಆಚರಣೆ ಅಂಗವಾಗಿ ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲಿ ಆತನ ಅಕ್ಕಪಕ್ಕದಲ್ಲಿ ಕೈಯಲ್ಲಿ ಚಾಕು ಹಿಡಿದು ಕುಣಿಯುತ್ತಾ, ಸಾರ್ವಜನಿಕವಾಗಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ಬಳಿಕ, ಕುಡಚಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ