
ಕುಕನೂರು (ಮೇ.20): ಮಣ್ಣು ಕೊಟ್ಟು ತಮ್ಮೂರಿಗೆ ತೆರಳುತ್ತಿದ್ದ ಇಬ್ಬರು ಮಸಣ ಸೇರಿದ ದುರ್ಘಟನೆ ಬುಧವಾರ ಜರುಗಿದೆ. ತಾಲೂಕಿನ ರಾಜೂರು ಗ್ರಾಮದ ಬೈಪಾಸ್ ರಸ್ತೆಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೆ ಮೃತಪಟ್ಟ ಘಟನೆ ಜರುಗಿದೆ.
ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮದ ನಿವಾಸಿಗಳಾದ ಶಂಕ್ರಪ್ಪ ತುತ್ತುರೊಟ್ಟಿ(47) ಮತ್ತು ಬಸಪ್ಪ ಗೋಗೆರಿ(50) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಕುಕನೂರು ಪಟ್ಟಣದ ಸಂಬಂಧಿಕರ ಅಂತ್ಯಸಂಸ್ಕಾರ ಮುಗಿಸಿಕೊಂಡು ಮರಳಿ ಬಳೂಟಗಿ ಗ್ರಾಮಕ್ಕೆ ಹೋಗುತ್ತಿದ್ದಾಗ ಟಿಪ್ಪರ್ ಮೂಲಕ ಬಂದ ಜವರಾಯ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರೂ ಸಹ ಮೃತಪಟ್ಟಿದ್ದಾರೆ. ಈ ಕುರಿತು ಕುಕನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಸಹ ಮಗೂಚಿ ಬಿದ್ದಿದೆ.
ಇಲ್ಲಿನ ಕೊಲ್ಲೂರಿನ ಹೊರವಲಯದಲ್ಲಿ ಸಂಭವಿಸಿದ ಜೀಪ್ ಹಾಗೂ ಲಾರಿ ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ದಾರುಣವಾಗಿ ಮೃತಪಟ್ಟು, 8 ಮಂದಿ ಗಾಯಗೊಂಡಿದ್ದಾರೆ. ಮೃತರು ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಕೇರಳ ಕೊಟ್ಟಾಯಂ ಜಿಲ್ಲೆಯ ಪಾಲಂ ಮೂಲದ ಜ್ಯೋತಿ (45) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಕೊಟ್ಟಾಯಂ ಜಿಲ್ಲೆಯ ಆರ್ಯ ಅನೂಪ್ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಉಳಿದ ಪ್ರಯಾಣಿಕರನ್ನು ಕುಂದಾಪುರ ಹಾಗೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಯಾತ್ರಾರ್ಥಿಗಳು ಭಾನುವಾರ ಕೊಲ್ಲೂರು ಮೂಕಾಂಬಿಕಾ ದೇವಾಲಯ ಹಾಗೂ ಕೊಡಚಾದ್ರಿ ಪ್ರವಾಸಕ್ಕೆಂದು ಕೇರಳದ ಕೊಟ್ಟಾಯಂ ಜಿಲ್ಲೆಯಿಂದ ಆಗಮಿಸಿದ್ದರು. ಬೆಳಗ್ಗೆ ಜೀಪಲ್ಲಿ ಕೊಡಚಾದ್ರಿಗೆ ತೆರಳಿ ಕೊಲ್ಲೂರಿಗೆ ಹಿಂದಿರುಗುತ್ತಿದ್ದಾಗ, ದಳಿ ಎಂಬಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಮಲ್ಪೆಯಿಂದ ಮೀನು ತುಂಬಿಸಿಕೊಂಡು ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ.
ದೇವರಾಜ್ ಎಂಬವರು ಚಾಲಕರಾಗಿದ್ದ ಜೀಪಿನಲ್ಲಿ ಮೂವರು ಮಕ್ಕಳು ಸೇರಿ 10 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಭೀಕರತೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 8 ಪ್ರಯಾಣಿಕರಿಗೆ ಗಾಯಗಳಾಗಿದ್ದು, ನಾಲ್ವರನ್ನು ಮಣಿಪಾಲದ ಕೆಎಂಸಿಗೆ ಹಾಗೂ ನಾಲ್ವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಸೇರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ