
ಹನೂರು (ಡಿ.18): ಕೂಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ ಆಘಾತಕಾರಿ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಬಳಿ ನಡೆದಿದೆ.
ತಮಿಳುನಾಡಿನ ಮಾಕಪಾಳ್ಯ ನಿವಾಸಿ ಶಿವಮೂರ್ತಿ ಸಾವನ್ನಪ್ಪಿದ ದುರ್ದೈವಿ. ಜಲ್ಲಿಪಾಳ್ಯ ಭಾಗದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ಅರಣ್ಯ ರಸ್ತೆಯ ಮೂಲಕ ಮರಳುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯದ ಜಲ್ಲಿಪಾಳ್ಯದ ಬಳಿ ಕಾಡಾನೆಗಳ ಗುಂಪು ಬೀಡು ಬಿಟ್ಟಿತ್ತು. ರಸ್ತೆಗೆ ಬಂದ ಆನೆಗಳು ಶಿವಮೂರ್ತಿ ಅವರ ಮೇಲೆ ಅಟ್ಯಾಕ್ ಮಾಡಿವೆ.
ಕಾಡಾನೆಯ ಭೀಕರ ದಾಳಿಗೆ ಸಿಲುಕಿದ ಶಿವಮೂರ್ತಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾಡಾನೆಗಳ ಹಿಂಡು ಅದೇ ಜಾಗದಲ್ಲಿ ಬೀಡು ಬಿಟ್ಟಿದ್ದರಿಂದ ಮೃತದೇಹದ ಹತ್ತಿರ ಹೋಗಲು ಸ್ಥಳೀಯರಿಗೆ ಸಾಧ್ಯವಾಗಲಿಲ್ಲ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆ ನಡೆಸಿ ಮೃತದೇಹ ಹಸ್ತಾಂತರ:
ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಕಾಡಿಗೆ ಓಡಿಸಿ ಬಳಿಕ ಶಿವಮೂರ್ತಿ ಅವರ ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಅರಣ್ಯ ರಸ್ತೆಯಲ್ಲಿ ಸಂಚರಿಸುವಾಗ ಜನರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ