ಬೆಳಗಾವಿ: ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸಪ್ಪ, ಮಹಿಳಾ ಪೇದೆ ದೂರು

By Kannadaprabha News  |  First Published Sep 17, 2023, 10:44 AM IST

ಪ್ರೀತಿಸುವುದಾಗಿ ಹೇಳಿಲ್ಲ ಎಂದು ಫೊನ್‌ನಲ್ಲಿ ತಿಳಿಸಿದ್ದಾನೆ. ಇದರಿಂದಾಗಿ ಮನನೊಂದ ಮಹಿಳಾ ಪೇದೆ ಪೊಲೀಸ್‌ ಪೇದೆ ಆನಂದ ಪಾಟೀಲ ವಿರುದ್ಧ ಪ್ರಕರಣ ಜೀವನ ಬಿಮಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.


ಬೆಳಗಾವಿ(ಸೆ.17): ಬೆಂಗಳೂರು ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಆನಂದ ಪಾಟೀಲ ವಿರುದ್ಧ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯದ ನಿಮಿತ್ತವಾಗಿ ಮಹಿಳಾ ಪೇದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ವಾಟ್ಸಾಪ್‌ ಮೆಸೇಜ್‌, ವಿಡಿಯೋ ಕಾಲ್ ಮೂಲಕ ಸಲುಗೆ ಆರಂಭವಾಗಿದೆ. ಬಳಿಕ ಆನಂದ ಪಾಟೀಲ ಮಹಿಳಾ ಪೇದೆಯೊಂದಿಗೆ ಮಾತನಾಡಿ ನಿನ್ನನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ. 

Tap to resize

Latest Videos

ತೆಲಂಗಾಣದಲ್ಲಿ ಭೀಕರ ಅಪಘಾತ: ತಿರುಪತಿ ದರ್ಶನ ಪಡೆದು ಬರುತ್ತಿದ್ದ ಐವರು ಕನ್ನಡಿಗ ಭಕ್ತರು ಸಾವು

ಪೇದೆಯ ಬಣ್ಣದ ಮಾತಿಗೆ ಮರುಳಾದ ಮಹಿಳಾ ಪೇದೆ ಈತನೊಂದಿಗೆ ಎಲ್ಲೆಂದರಲ್ಲಿ ಸುತ್ತಾಡಿದ್ದಾಳೆ. ಮದುವೆಯಾಗುವುದಾಗಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ. ನಂತರ ಮಹಿಳಾ ಪೇದೆ ಮದುವೆ ವಿಷಯವನ್ನು ಪ್ರಸ್ತಾಪಿಸಿದಾಗ ನಾನು ಕೇವಲ ಸ್ನೇಹಿತ ಎಂದು ಭಾವಿಸಿದ್ದೇನೆ. ಪ್ರೀತಿಸುವುದಾಗಿ ಹೇಳಿಲ್ಲ ಎಂದು ಫೊನ್‌ನಲ್ಲಿ ತಿಳಿಸಿದ್ದಾನೆ. ಇದರಿಂದಾಗಿ ಮನನೊಂದ ಮಹಿಳಾ ಪೇದೆ ಪೊಲೀಸ್‌ ಪೇದೆ ಆನಂದ ಪಾಟೀಲ ವಿರುದ್ಧ ಪ್ರಕರಣ ಜೀವನ ಬಿಮಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

click me!