ದೆಹಲಿಯಲ್ಲಿ ಸ್ವಿಜರ್ಲೆಂಡ್‌ ಮಹಿಳೆ ಹತ್ಯೆ: ಕೈಕಾಲು ಕಟ್ಟಿ, ಪ್ಲಾಸ್ಟಿಕ್‌ ಕವರ್‌ನಲ್ಲಿ ಡೆಡ್‌ಬಾಡಿ ಸುತ್ತಿದ ಪಾಗಲ್‌ ಪ್ರೇಮಿ!

By BK Ashwin  |  First Published Oct 21, 2023, 3:01 PM IST

ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ 30 ವರ್ಷದ ಸ್ವಿಸ್ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ. 


ದೆಹಲಿ (ಅಕ್ಟೋಬರ್ 21, 2023): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಿಜರ್ಲೆಂಡ್‌ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ಶನಿವಾರ ದೆಹಲಿ ಪೊಲೀಸರು ಭಾರತೀಯ ಆರೋಪಿಯನ್ನು ಬಂಧಿಸಿದ್ದಾರೆ. 

ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ 30 ವರ್ಷದ ಸ್ವಿಸ್ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ. ದೇಹದ ಕೈ ಮತ್ತು ಕಾಲುಗಳನ್ನು ಲೋಹದ ಸರಪಳಿಗಳಿಂದ ಕಟ್ಟಲಾಗಿತ್ತು. ಹಾಗೂ ಮೃತದೇಹದ ಮೇಲಿನ ಭಾಗವನ್ನು ಕಪ್ಪು ಪ್ಲಾಸ್ಟಿಕ್ ಚೀಲದಿಂದ ಮುಚ್ಚಲಾಗಿತ್ತು ಎಂದೂ ಪೊಲೀಸರು ತಿಳಿಸಿದ್ದಾರೆ.

Tap to resize

Latest Videos

ಇದನ್ನು ಓದಿ: ನವರಾತ್ರಿ ಉಪವಾಸ ಮಾಡ್ತಿದ್ದ ಅಣ್ಣ, ಅಕ್ಕನಿಂದ 15 ವರ್ಷದ ಸಹೋದರಿಯ ಬೆತ್ತಲೆಗೊಳಿಸಿ ಬರ್ಬರ ಹತ್ಯೆ!

ಆರೋಪಿಯನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತ ಸ್ವಿಟ್ಜರ್ಲೆಂಡ್‌ನಲ್ಲಿ ಭೇಟಿಯಾಗಿದ್ದ 30 ವರ್ಷದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆಕೆಗೆ ಬೇರೆಯವರ ಜೊತೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದೂ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಬ್ಬರೂ ಅವರವರ ದೇಶದಲ್ಲಿದ್ದರೂ ಸಂಬಂಧ ಹೊಂದಿದ್ದರು. ಗುರುಪ್ರೀತ್ ಸಿಂಗ್ ಆಗಾಗ್ಗೆ ಮಹಿಳೆಯನ್ನು ನೋಡಲು ಸ್ವಿಟ್ಜರ್ಲೆಂಡ್‌ಗೆ ಹೋಗುತ್ತಿದ್ದರು ಎಂಬುದನ್ನೂ ದೆಹಲಿ ಪೊಲೀಸರು ಹೇಳಿದ್ದಾರೆ. ಆದರೆ, ಸ್ವಿಸ್‌ ಮಹಿಳೆಗೆ ಬೇರೆ ಪುರುಷನ ಜತೆ ಅಕ್ರಮ ಸಂಬಂಧವಿದೆ ಎಂದು ಗುರುಪ್ರೀತ್‌ ಸಿಂಗ್‌ಗೆ ಅನುಮಾನವಿದ್ದ ಕಾರಣ, ಈ ಬಾರಿ ಭಾರತಕ್ಕೆ ಬರುವಂತೆ ಮಹಿಳೆಗೆ ಹೇಳಿ ಕೊಲೆಗೆ ಯೋಜನೆ ರೂಪಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳ ಬಗ್ಗೆ ಎಚ್ಚರಿಕೆ ಇರಲಿ: ನಿಮ್ಮ ಹಣ ರಕ್ಷಿಸಿಕೊಳ್ಳಲು ಹೀಗೆ ಮೋಸ ಹೋಗ್ಬೇಡಿ..!

ಆರೋಪಿ ಮಾಟ ಮಂತ್ರ ಮಾಡುವ ನೆಪದಲ್ಲಿ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ನಂತರ ಆಕೆಯನ್ನು ಹತ್ಯೆಗೈದಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ ತಿಲಕ್ ನಗರ ಪ್ರದೇಶದ ಸರ್ಕಾರಿ ಶಾಲೆಯ ಬಳಿ ವಿದೇಶಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳ ಸಹಾಯದಿಂದ ಶವವನ್ನು ಕಾರಿನಲ್ಲಿ ಅಲ್ಲಿಗೆ ತರಲಾಗಿದೆ ಎಂದು ಪೊಲೀಸರು ಪತ್ತೆ ಮಾಡಿದರು.

ಬಳಿಕ, "ಕಾರಿನ ನೋಂದಣಿ ಸಂಖ್ಯೆಯನ್ನು ಕಂಡುಕೊಂಡಿದ್ದು ಮತ್ತು ತಂಡವು ವಾಹನದ ಮಾಲೀಕರನ್ನು ಪತ್ತೆಹಚ್ಚಿದೆ. 2 ತಿಂಗಳ ಹಿಂದೆ ಕಾರನ್ನು ಮಾರಾಟ ಮಾಡಿರುವುದಾಗಿ ಮಾಲೀಕರು ಹೇಳಿದ್ದಾರೆ" ಎಂದೂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂತಿಮವಾಗಿ ಗುರುಪ್ರೀತ್‌ನನ್ನು ಪತ್ತೆ ಹಚ್ಚಿ ಬಂಧಿಸಲಾಗಿದ್ದು, ಅಧಿಕಾರಿಗಳು ಅವರ ಮನೆಯಿಂದ 2.25 ಕೋಟಿ ರೂ. ನಗದನ್ನು ಸಹ ವಶಪಡಿಸಿಕೊಂಡಿದ್ದಾರೆ. ಹಾಗೂ, ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದೂ ದೆಹಲಿ ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ಮದ್ವೆಯಾದ ಮರುದಿನವೇ ಲಕ್ಷ ಲಕ್ಷ ಹಣ, ಒಡವೆಯೊಂದಿಗೆ ಎಸ್ಕೇಪ್‌ ಆದ ವಧು!

click me!