Davanagere: ಅನಧಿಕೃತವಾಗಿ ವನ್ಯಜೀವಿಗಳ ಸಾಕಾಣಿಕೆ: ಮಾಜಿ ಸಚಿವ ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರ ದಾಳಿ

By Govindaraj S  |  First Published Dec 22, 2022, 10:44 AM IST

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗು ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಒಡೆತನದ  ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರು ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ನಿನ್ನೆ (ಬುಧವಾರ)  ದಾಳಿ ನಡೆಸಿದ್ದಾರೆ.


ವರದಿ: ವರದರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ದಾವಣಗೆರೆ

ದಾವಣಗೆರೆ (ಡಿ.22): ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗು ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಒಡೆತನದ  ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರು ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ನಿನ್ನೆ (ಬುಧವಾರ)  ದಾಳಿ ನಡೆಸಿದ್ದಾರೆ. ದಾಳಿ ವೇಳೆ 29ಕ್ಕು ಹೆಚ್ಚು ವನ್ಯಮೃಗಗಳು ಪತ್ತೆಯಾಗಿವೆ. ಈ ವೇಳೆ ಎರಡು ನರಿಗಳು, 10 ಕೃಷ್ಣ ಮೃಗಗಳು, ಏಳು ಚುಕ್ಕೆ ಜಿಂಕೆಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು ಹಾಗೂ ಎರಡು ನರಿಗಳು ಸಿಕ್ಕಿವೆ.

Tap to resize

Latest Videos

ಸಿಸಿಬಿಗೆ ತಗಲಾಕಿಕೊಂಡಿದ್ದಾ ಸೆಂಥಿಲ್ ಪ್ರಕರಣಕ್ಕೆ ಲಿಂಕ್: ಡಿ.18ರಂದು ಬೆಂಗಳೂರಿನ ನಗರದ ಹೆಬ್ಬಾಳದಲ್ಲಿ ಕಲ್ಲೇಶ್ವರ ಮಿಲ್‌ನಲ್ಲಿ ಕೆಲಸ ಮಾಡ್ತಿದ್ದಾ ಸೆಂಥಿಲ್ ಎಂಬವ ಜಿಂಕೆ ಚರ್ಮ, ಜಿಂಕೆ ಕೊಂಬು, ಜಿಂಕೆ ಮೂಳೆ ಮಾರಾಟ ಮಾಡಲು ಬಂದಿದ್ದವನು ಸಿಸಿಬಿ ಪೋಲಿಸರು ತಗಲಾಕಿಕೊಂಡಿದ್ದಾ. ಇನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆಗೆ ಒಳಪಡಿಸಿದ್ದು. ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆ, ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ ಎಂದು ಡಿಎಫ್ಓ ಜಗನ್ನಾಥ್ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದು ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆಯ ಆವರಣ ಕುಡುಕರ ದಿನನಿತ್ಯದ ಪಾರ್ಟಿ ಹಾಲ್, 1200 ಬಿಯರ್ ಬಾಟಲ್ ಪತ್ತೆ!

ವನ್ಯ ಜೀವಿಗಳು ಅರಣ್ಯ ಇಲಾಖೆಗೆ ಹಸ್ತಾಂತರ: ಫಾರ್ಮ್‌ ಹೌಸ್‌ನಲ್ಲಿ ಸಿಸಿಬಿ ಪೋಲಿಸರಿಗೆ ಸಿಕ್ಕ ವನ್ಯಜೀವಿಗಳನ್ನು ಈಗಾಗಲೇ ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿಲಾಗಿದ್ದು, ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಸಂಬಂಧ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ನ್ಯಾಯಾಲಯವನ್ನು ಕೋರಲಾಗಿದೆ. ಆದೇಶದ ಪ್ರತಿ ಸಿಗುತ್ತಿದ್ದಂತೆಯೇ ತನಿಖಾಧಿಕಾರಿಯನ್ನು ನೇಮಿಸಿ ಪ್ರಕರಣದ ತನಿಖೆ ಆರಂಭಿಸಿ ಶೀಘ್ರವೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ದಾವಣಗೆರೆ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್‌.ಎಚ್‌. ಜಗನ್ನಾಥ ಮಾಹಿತಿ ನೀಡಿದರು.

ರಾಜ್ಯದಲ್ಲಿ ಕನ್ನಡ ಪ್ರಧಾನವಾಗಿರುವುದು ದಾವಣಗೆರೆಯಲ್ಲಿ: ಸಂಸದ ಸಿದ್ದೇಶ್ವರ

ಪ್ರಾಣಿಪ್ರಿಯ ಎಸ್.ಎಸ್.ಮಲ್ಲಿಕಾರ್ಜುನ್‌ಗೆ ಸಂಕಷ್ಟ: ಎಸ್ ಎಸ್ ಮಲ್ಲಿಕಾರ್ಜುನ್ ಮೊದಲಿನಿಂದಲು ಪ್ರಾಣಿಪ್ರಿಯ.ಅವರ ಕಲ್ಲೇಶ್ ರೈಸ್ ಮಿಲ್‌ನ ಫಾರ್ಮ್‌ಹೌಸ್‌ನಲ್ಲಿ ವಿವಿಧ ತಳಿಯ ಕುದುರೆಗಳನ್ನು ಸಾಕಲಾಗಿದ್ದು 2000ನೇ ವರ್ಷದಿಂದ ಜಿಂಕೆ ಸಾಕುತ್ತಿದ್ದೇವೆ ಅದಕ್ಕೆ ಪರವಾನಿಗೆ ಪಡೆದಿದ್ದೇವೆಂದು ತಿಳಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಡಿಹೆಚ್‌ಓ ಯಾವುದೇ ಪರವಾನಿಗೆ ಇಲ್ಲ ಎಂದಿದ್ದಾರೆ. ಕಾಡುಹಂದಿ ಮುಂಗುಸಿ, ಕೃಷ್ಣ ಮೃಗ ನರಿಗಳು ಸಿಕ್ಕಿರುವುದರಿಂದ ಪ್ರಕರಣ ದಾಖಲಿಸಲು ಅರಣ್ಯ ಇಲಾಖೆ ಮುಂದಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾದ್ರೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್‌ಗೆ ಸಂಕಷ್ಟ ತಪ್ಪಿದ್ದಲ್ಲ.

click me!