
ತುಮಕೂರು/ಶಿರಾ (ನ.18): ಅದಿರು ತುಂಬಿಕೊಂಡು ಬರುತ್ತಿದ್ದ ಲಾರಿಗೆ ಗೋಧಿ ಚೀಲಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಯಿಲು ದೊರೆ ಗ್ರಾಮದ ಬಳಿ ಸೋಮವಾರ ನಡೆದಿದೆ.
ಲಾರಿಯಲ್ಲಿದ್ದ ಗೋಧಿ ತುಂಬಿದ ಚೀಲ ನೆಲಕ್ಕುರಳಿ ರಸ್ತೆಯೆಲ್ಲ ಗೋಧಿಮಯವಾಗಿತ್ತು. ಈ ವೇಳೆ, ಗೋಧಿಯನ್ನು ಬಾಚಿಕೊಳ್ಳಲು ಜನರು ಮುಗಿಬಿದ್ದಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹುಳಿಯಾರು ಮಾರ್ಗದಿಂದ ಅದಿರು ತುಂಬಿಕೊಂಡು ಬರುತ್ತಿದ್ದ ಲಾರಿಗೆ, ಶಿರಾದಿಂದ ಗೋಧಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅದಿರು ತುಂಬಿದ ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿದ್ದ ಆಂಜನೇಯ ದೇವಸ್ಥಾನದ ಆವರಣಕ್ಕೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಆತನನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ