
ಬೆಂಗಳೂರು (ಜು.29): ಲವ್ವರ್ ಗಾಗಿ ಮೊಬೈಲ್ ಶಾಪ್ ನ ಟಾಯ್ಲೆಟ್ ನಲ್ಲೇ ಕೂತು ಮೊಬೈಲ್ ಕಳ್ಳತನ ಮಾಡಿದ್ದ ಭೂಪನನ್ನು ಬಂಧಿಸಲಾಗಿದೆ. ಜುಲೈ 22 ರಂದು ಜೆಪಿ ನಗರದ ಕ್ರೋಮಾ ಮೊಬೈಲ್ ಶಾಪ್ ನಲ್ಲಿ ಈ ನಡೆದಿದ್ದು, ಸಂಜೆ ಟೈಮಲ್ಲಿ ಮೊಬೈಲ್ ಶಾಪ್ ಗೆ ಗ್ರಾಹಕನಂತೆ ಹೋಗಿದ್ದ ಅಬ್ದುಲ್ ಮುನಾಫ್ ಮೊಬೈಲ್ ನೋಡ್ತಾ ನೋಡ್ತಾಲೇ ಟಾಯ್ಲೆಟ್ ಸೇರ್ಕೊಂಡಿದ್ದಾನೆ. ನಂತರ ಮೊಬೈಲ್ ಶಾಪ್ ಕ್ಲೋಸ್ ಆಗ್ತಿದ್ದಂತೆ ಲಕ್ಷ ಲಕ್ಷ ಬೆಲೆ ಬಾಳೋ ಮೊಬೈಲ್ ಎಗರಿಸಿದ್ದಾನೆ. ಬೆಳಿಗ್ಗೆ ಮೊಬೈಲ್ ಶಾಪ್ ತೆರೆಯುವ ವರೆಗೂ ಅಂಗಡಿಯಲ್ಲೇ ಕೂತಿದ್ದ ಕಳ್ಳ ಶಾಪ್ ಓಪನ್ ಮಾಡ್ತಿದ್ದಂತೆ ಇನ್ನೊಂದು ಬಾಗಿಲಿನಿಂದ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಅಬ್ದುಲ್ ಮುನಾಫ್ ನನ್ನ ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಲಕ್ಷ ರೂ ಮೌಲ್ಯದ 6 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ಕುರುಡು ಎಂಬ ಮಾತಿದೆ. ಪ್ರೀತಿಗಾಗಿ ಜನ ಏನೆನ್ನೆಲ್ಲಾ ಮಾಡ್ತಾರೆ ಅನ್ನೋದಕ್ಕೆ ಈ ಘಟನೆಯೂ ಒಂದು ಸಾಕ್ಷಿ.
ಕೆಂಗೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ:
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೆಂಗೇರಿಯ ಕೊಮ್ಮಘಟ್ಟ ರಸ್ತೆಯಲ್ಲಿ ನಡೆದಿದೆ. ವೇಗವಾಗಿ ಬಂದು ನಿಯಂತ್ರಣ ತಪ್ಪಿ ಪೂಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜು ಆಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಪಲ್ಟಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಡಹಗಲೇ ಮನೆ ಬೀಗ ಒಡೆದು ಕಳ್ಳತನ ಮಾಡುತ್ತಿದ್ದವನ ಬಂಧನ:
ಬೆಂಗಳೂರು: ಹಾಡಹಗಲೇ ಮನೆ, ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಾಲ್ಮೀಕಿ ನಗರ ನಿವಾಸಿ ಯಾಸೀನ್ ಖಾನ್ ಅಲಿಯಾಸ್ ಚೋರ್ ಇಮ್ರಾನ್ (33) ಬಂಧಿತ. ಈತ ನೀಡಿದ ಮಾಹಿತಿ ಮೇರೆಗೆ 2.50 ಕೆ.ಜಿ. ಬೆಳ್ಳಿ ಸಾಮಗ್ರಿಗಳು, 100 ಗ್ರಾಂ ಚಿನ್ನಾಭರಣ ಹಾಗೂ .39 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ಎರಡು ದಶಕಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಆರೋಪಿ ಯಾಸೀನ್, ನಗರದ ವಿವಿಧೆಡೆ ಸುತ್ತಾಡಿ ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಗುರುತಿಸಿಕೊಂಡು ಹಾಡಹಗಲೇ ಬೀಗ ಒಡೆದು ನಗದು, ಆಭರಣ ಕಳವು ಮಾಡಿ ಪರಾರಿಯಾಗುತ್ತಿದ್ದ. ಕದ್ದ ಮಾಲುಗಳನ್ನು ಗೋವಾಗೆ ತೆರಳಿ ಪರಿಚಿತರ ಮೂಲಕ ವಿಲೇವಾರಿ ಮಾಡಿ ಹಣ ಪಡೆದು ಮೋಜು-ಮಸ್ತಿ ಮಾಡುತ್ತಿದ್ದ. ಹಣ ಖಾಲಿಯಾದ ಬಳಿಕ ಮತ್ತೆ ಮನೆಗಳವು ಮಾಡುತ್ತಿದ್ದ.
Bengaluru Crime; ಎಣ್ಣೆ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದ ಗೆಳೆಯ!
ಈತನ ವಿರುದ್ಧ ಬೆಂಗಳೂರು ನಗರ, ಮೈಸೂರು, ಹೈದರಾಬಾದ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 60 ಅಧಿಕ ಪ್ರಕರಣಗಳು ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ ಜಾಮೀನು ಪಡೆದು ಹೊರಬಂದು ನಂತರವೂ ತನ್ನ ಕಳ್ಳತನ ಚಾಳಿ ಮುಂದುವರಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru Crime; ಸುಂದರಿ ಪತ್ನಿಗೆ ಆ್ಯಸಿಡ್ ಎರಚಿ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
ಪ್ರಕರಣವೊಂದರಲ್ಲಿ ಸಿಸಿಬಿ ಪೊಲೀಸರು ಇತ್ತೀಚೆಗೆ ಆರೋಪಿ ಯಾಸೀನ್‌ನನ್ನು ಬಂಧಿಸಿ ಜೈಲಿಗಟ್ಟಿದ್ದರು. ಬಾಡಿ ವಾರೆಂಟ್ ಪಡೆದು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹೋಲ್‌ಸೇಲ್ ಸೀರೆ ಅಂಗಡಿ ಕಳವು ಹಾಗೂ ಮನೆಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ