ಮದ್ವೆಗೆ ಸಿಗ್ಲಿಲ್ಲ ಮನ್ನಣೆ, ಸಾವಿನಲ್ಲಿ ಒಂದಾದ ಪ್ರೇಮಿಗಳು..!

Published : Nov 11, 2020, 05:22 PM IST
ಮದ್ವೆಗೆ ಸಿಗ್ಲಿಲ್ಲ ಮನ್ನಣೆ, ಸಾವಿನಲ್ಲಿ ಒಂದಾದ ಪ್ರೇಮಿಗಳು..!

ಸಾರಾಂಶ

ಮನೆ ಬಿಟ್ಟು ಬಂದಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು, (ನ.11): ಪ್ರೀತಿಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.

ಮಲ್ಲಟ ಗ್ರಾಮದ ಮಹೇಶ (20) ಮತ್ತು ಅಕ್ಷತಾ (18) ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ,  ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರಿಂದ ಎರಡೂ ಮನೆಗಳಲ್ಲೂ ಇವರ ಪ್ರೀತಿಗೆ ಮನ್ನಣೆ ಸಿಕ್ಕಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಪುತ್ರನ ಕಾರು ಅಪಘಾತ...!

ಗ್ರಾಮದ ಹೊರವಲಯದ ಜಮೀನಿನಲ್ಲಿ ವಿಷ ಸೇವನೆ ಮಾಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ವೇಳೆ ಮನೆ ಬಿಟ್ಟು ಬಂದಿದ್ದ ಯುವಕ ಯುವತಿ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ