
ರಾಯಚೂರು, (ಡಿ.12): ವಿವಾಹಿತನೊಂದಿಗೆ ಅಪ್ರಾಪ್ತ ಬಾಲಕಿಯೊಬ್ಬಳು ಪ್ರೇಮಿಸಿ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಹೊರವಲಯದಲ್ಲಿ ನಡಿದಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ಜಾಲೇರದೊಡ್ಡಿಯ ಮಹಾದೇವಿ (17) ಸಾವನ್ನಪ್ಪಿದ್ದಾಳೆ. ಇನ್ನು ಯರಜಂತಿ ಗ್ರಾಮದ ನರಸಪ್ಪ (28) ಸ್ಥಿತಿ ಗಂಭೀರವಾಗಿದೆ.
ಇದೆಂಥಾ ಕ್ರೌರ್ಯ... ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಅಪರಿಚಿತ
ಈಗಾಗಲೇ ನರಸಪ್ಪಗೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ, ಇವರಿಬ್ಬರೂ ಪ್ರೀತಿಸುತ್ತಿದ್ದರು. ವಿವಾಹಿತನೊಂದಿಗೆ ಮಗಳ ಪ್ರೀತಿ ವಿಚಾರ ತಿಳಿದ ಮಹಾದೇವಿ ಪಾಲಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಮನನೊಂದು ನಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಚೀಟಿ ಬರೆದಿಟ್ಟು ಒಟ್ಟಿಗೆ ವಿಷ ಸೇವಿಸಿದ್ದಾರೆ. ದುರದೃಷ್ಟವಶಾತ್ ಯುವತಿ ಸಾವನ್ನಪ್ಪಿದ್ದಾಳೆ. ಮುಂದಿನ ಜನ್ಮದಲ್ಲಿ ಗಂಡ-ಹೆಂಡತಿಯಾಗುತ್ತೇವೆ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ. ಈ ಘಟನೆ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ