
ಹಾವೇರಿ, (ಜುಲೈ.13): ಅಪ್ರಾಪ್ತ ವಯಸ್ಸಿನ ಇಬ್ಬರು ಪ್ರೇಮಿಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
ಇಬ್ಬರು ಅಪ್ರಾಪ್ತ ಪ್ರೇಮಿಗಳು ಬ್ಯಾಡಗಿ ಪಟ್ಟಣದ ಕುಂಬಾರ ಓಣಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಕಳೆದ ಕೆಲ ವರ್ಷಗಳಿಂದ ಅನ್ಯ ಕೋಮಿನ ಬಾಲಕನೊಂದಿಗೆ ಕುಂಬಾರ ಒಣಿಯ ಬಾಲಕಿಗೆ ಪ್ರೇಮಾಂಕುರವಾಗಿ ಇಬ್ಬರೂ ಪರಸ್ಪರ ಪ್ರೀತಿ ಮಾಡುತ್ತಿದ್ದರು.
ಮೊಬೈಲ್ ಕೊಡಿಸದ್ದಕ್ಕೆ ತಂದೆ ಜನ್ಮದಿನದಂದೇ ಮಗ ನೇಣಿಗೆ ಶರಣು!
ಬ್ಯಾಡಗಿ ಪಟ್ಟಣದ ಎಸ್ ಎಸ್ ಪಿಎನ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಬಾಲಕಿ, ಇಂದು(ಬುಧವಾರ) ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗಿ ಬರುವುದಾಗಿ ಶಾಲೆಯಲ್ಲಿ ತಿಳಿಸಿ ಅಲ್ಲಿಂದ ಪ್ರಿಯಕರನ ಮನೆಗೆ ತೆರಳಿದ್ದಾಳೆ. ನಂತರ ಕೆಲ ಗಂಟೆಗಳ ಕಾಲ ಇಬ್ಬರೂ ಒಟ್ಟಿಗೆ ಸಮಯವನ್ನು ಕಳೆದಿದ್ದಾರೆ. ಸಂಜೆಯ ಹೊತ್ತಿಗೆ ಬಾಲಕನ ಮನೆಯಲ್ಲಿಯೇ ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಇಬ್ಬರನ್ನು ಸ್ಥಳೀಯ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ.
ಆದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡ 2 ಕುಟುಂಬಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಅಪ್ರಾಪ್ತ ವಯಸ್ಸಿನಲ್ಲಿಯೇ ಪ್ರೀತಿ ಪ್ರೇಮ ಎಂಬ ಹುಚ್ಚಾಟಕ್ಕೆ ಬಿದ್ದು ಜೀವ ಕಳೆದುಕೊಂಡಿವೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ