ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದ ಘಟನೆ| ನಿನ್ನೆಯಿಂದ ಮನೆಯಿಂದ ನಾಪತ್ತೆಯಾಗಿದ್ದ ಯುವತಿ| ಕೆಲವು ದಿನಗಳ ಹಿಂದೆ ಬೇರೊಬ್ಬ ಯುವಕನ ಜೊತೆ ಯುವತಿಯ ನಿಶ್ಚಿತಾರ್ಥ| ಪ್ರಿಯಕರನ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿಯೇ ಇಬ್ಬರೂ ಆತ್ಮಹತ್ಯೆಗೆ ಶರಣು|
ಹಾವೇರಿ(ಏ.25): ಪ್ರೇಮಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗನೂರು ಗ್ರಾಮದ ಬಳಿ ಇಂದು(ಭಾನುವಾರ) ನಡೆದಿದೆ. ವಿದ್ಯಾಶ್ರೀ ಗಾಳಿ (22) ಮತ್ತು ಇರ್ಷಾದ್ ಕುಡಚಿ (23) ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ.
ವಿದ್ಯಾಶ್ರೀ ನಿನ್ನೆ(ಶನಿವಾರ) ಬೆಳಗಿನ ಜಾವ ಮನೆಯಿಂದ ನಾಪತ್ತೆಯಾಗಿದ್ದಾಳೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಆದರೆ, ಇಂದು ಪ್ರೇಮಿಗಳು ಶವವಾಗಿ ಪತ್ತೆಯಾಗಿದ್ದಾರೆ.
ಕಲಬುರಗಿ: ಸೋಂಕಿತ ತಾಯಿ ಮುಖ ನೋಡಲು ಬಿಡದ ಆಸ್ಪತ್ರೆ ಸಿಬ್ಬಂದಿ, ಯುವಕ ಆತ್ಮಹತ್ಯೆಗೆ ಯತ್ನ
ಕೆಲವು ದಿನಗಳ ಹಿಂದೆ ಬೇರೊಬ್ಬ ಯುವಕನ ಜೊತೆ ವಿದ್ಯಾಶ್ರೀ ಅವರ ನಿಶ್ಚಿತಾರ್ಥ ನೆರವೇರಿತ್ತು ಎಂದು ಹೇಳಲಾಗುತ್ತಿದೆ. ಹೀಗಾಗಿ ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿಯೇ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.