ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಬಿಜೆಪಿ ಘಟಕಾಧ್ಯಕ್ಷ

Published : Oct 11, 2022, 08:19 PM ISTUpdated : Oct 11, 2022, 08:20 PM IST
ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಬಿಜೆಪಿ ಘಟಕಾಧ್ಯಕ್ಷ

ಸಾರಾಂಶ

ಲೈಸೆನ್ಸ್‌ಡ್‌ ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಭಾಗೀರಥ್ ಬಿಯಾನಿ ಸಾವಿಗೆ ಶರಣಾಗಿದ್ದು, ಆತ್ಮಹತ್ಯೆ ನಿಖರ ಕಾರಣ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೀಡ್‌: ಮಹಾರಾಷ್ಟ್ರದ ಬೀಡ್ ನಗರ ಘಟಕದ ಮುಖ್ಯಸ್ಥರೋರ್ವರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಲೈಸೆನ್ಸ್‌ಡ್‌ ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಭಾಗೀರಥ್ ಬಿಯಾನಿ ಸಾವಿಗೆ ಶರಣಾಗಿದ್ದು, ಆತ್ಮಹತ್ಯೆ ನಿಖರ ಕಾರಣ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಾಗೀರಥ್ ಬಿಯಾನಿ ಬೀಡ್ ನಗರ ಘಟಕದ  ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸರ್ವೀಸ್ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ.

ಪೇಠಬೀಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮೀರಾನಗರ (Meera Nagar) ಪ್ರದೇಶದಲ್ಲಿನ ತನ್ನ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಬಿಯಾನಿ (Bhagirath Biyani) ಅವರ ಕುಟುಂಬ ಸದಸ್ಯರು ಮಧ್ಯಾಹ್ನದ ವೇಳೆ ಅವರು ನಿಶ್ಚಲವಾಗಿ ಬಿದ್ದಿರುವುದನ್ನು ನೋಡಿ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು. ಪ್ರಾಥಮಿಕ ವರದಿಯಂತೆ ಇದು ಆತ್ಮಹತ್ಯೆಯಂತೆಯೇ ಕಂಡು ಬರುತ್ತಿದೆ. ಆದರೆ ಪೊಲೀಸರು ಎಲ್ಲಾ ಕೋನಗಳಿಂದ ಈ ಬಗ್ಗೆ ತನಿಖೆ ನಡೆಸುವರು ಎಂದು ಬೀಡ್ ಸೂಪರಿಟೆಂಡೆಂಟ್ ಆಫ್ ಪೊಲೀಸ್ ನಂದ ಕುಮಾರ್ ಠಾಕೂರ್ (Nand Kumar Thakur) ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

ಸುಶಾಂತ್ ಸಿಂಗ್ ಸಾವಿನ ನಂತರ ಮೊದಲ ಬಾರಿಗೆ ಸಹೋದರನೊಂದಿಗೆ ಕಾಣಿಸಿಕೊಂಡ ರಿಯಾ ಚಕ್ರವರ್ತಿ

ಕಿವಿಯಿಂದ (Ear) ಮೇಲ್ಭಾಗದಲ್ಲಿ ಬುಲೆಟ್ (Bullet) ಹೊಕ್ಕಿದ ಗಾಯದ ಗುರುತಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಭಾಗೀರಥ್ ಬಿಯಾನಿ ತಮ್ಮ 50ರ ಪ್ರಾಯದಲ್ಲಿದ್ದು, ಕೆಲ ಆರೋಗ್ಯ ಸಮಸ್ಯೆಯಿಂದಲೂ ಅವರು ಬಳಲುತ್ತಿದ್ದರು ಎಂದು ಕೆಲ ವರದಿಗಳು ಹೇಳಿವೆ. ಸೋಮವಾರ ರಾತ್ರಿ ಮಲಗಲು ಹೋದ ಅವರು ಇಂದು ಮುಂಜಾನೆ ಹೊರ ಬಂದಿರಲಿಲ್ಲ. ಹೀಗಾಗಿ ಅವರ ಕುಟುಂಬ ಸದಸ್ಯರು ಅವರು ಮಲಗಿದ್ದ ಕೋಣೆಯನ್ನು ಬಲವಂತವಾಗಿ ಮುರಿದು ಒಳ ನುಗ್ಗಿದಾಗ ಅವರು ನಿರ್ಜೀವವಾಗಿ ಮಲಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಕ್ರೇನ್‌ ವಿರುದ್ಧ ಯುದ್ಧ ಮಾಡಲು ತಯಾರಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ Russia ರ‍್ಯಾಪ್‌ ಗಾಯಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!