ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ: ಪತ್ತೆ ಮಾಡಿದ ಗ್ರಾಹಕ

Published : Jun 15, 2020, 10:51 PM ISTUpdated : Jun 16, 2020, 07:56 AM IST
ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ: ಪತ್ತೆ ಮಾಡಿದ ಗ್ರಾಹಕ

ಸಾರಾಂಶ

ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ, (ಜೂನ್.15):  ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ್ ಬಂಧಿತ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು.

ಕಾಡು ಪ್ರಾಣಿ ಎಂದು ತಿಳಿದು ಹಾರಿಸಿದ ಗುಂಡು ಗೆಳಯನಿಗೆ ಬಿತ್ತು...!

ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮಸ್ಥರು ವಾಹನವನ್ನು ಪರಿಶೀಲಿಸಿದಾಗ ವಾಹನದಲ್ಲಿ ಹತ್ತಾರು ಕೆ.ಜಿ ಗೋಮಾಂಸ ಇರುವುದು ಪತ್ತೆಯಾಗಿದೆ.

ಕೂಡಲೇ ಶ್ರೀಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಗೋಮಾಂಸವನ್ನು ತಂದು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಗಲಾಟೆ ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲವು ಸಮಯ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಷ್ಟೊತ್ತಿಗೆ ಸ್ಥಳಕ್ಕೆ ಬಂದ ಪೊಲೀಸರು ಗೋಮಾಂಸ ಮತ್ತು ಮಾಂಸ ಮಾರಾಟ ಮಾಡಲು ಬಳಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಗೋಮಾಂಸ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನ್ನು ಬಂಧಿಸಿದ್ದಾರೆ. ಆದರೆ ಮತ್ತೊಬ್ಬ ಆರೋಪಿ ಬಷೀರ್ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಘಟನೆ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?