7 ವರ್ಷಗಳಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಬಂಧನ

Published : Aug 31, 2022, 04:13 PM IST
7 ವರ್ಷಗಳಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಬಂಧನ

ಸಾರಾಂಶ

ಹರ್ಯಾಣದ ಅಂಬಾಲಾದಲ್ಲಿ ಮಗಳ ಮೇಲೆ 7 ವರ್ಷಗಳಿಂದ ಹಲವು ಬಾರಿ ಅತ್ಯಾಚಾರವೆಸಗಿದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಏಳು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ (Rape) ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಹರ್ಯಾಣದ ಅಂಬಾಲಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇನ್ನು, ಸೋಮವಾರ ಸಂಜೆಯೇ ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (Protection of Children from Sexual Offences) (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಗೆ ಈಗ 17 ವರ್ಷವಾಗಿದ್ದು, ಆಕೆ ಅಂಬಾಲಾ ಕಂಟೋನ್ಮೆಂಟ್‌ನ (Ambala Cantonment) ಸರ್ಕಾರಿ ಶಾಲೆಯ ವಿದ್ಯಾರ್ಥಿನಿ. ಮಗಳು ಪೊಲೀಸರಿಗೆ ದೂರು ನೀಡಿದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಂಗಳವಾರ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಲಾಗಿದೆ ಎಂದೂ ಪೊಲೀಸರು (Police) ಹೇಳಿದ್ದಾರೆ.

ತಾನು 3 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಿನಿಂದಲೂ ಹಾಗೂ ತನಗೆ 10 ವರ್ಷ ವಯಸ್ಸಿನಿಂದಲೂ ತನ್ನ ತಂದೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಕಿ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಚಂಡೀಗಢದಲ್ಲಿ (Chandigarh) ಸಂಬಂಧಿಕರನ್ನು ಭೇಟಿಯಾದಾಗ ತನ್ನ ತಂದೆ ಮೊದಲ ಬಾರಿಗೆ ತನ್ನ ಮೇಲೆ ಲೈಂಗಿಕ ಕಿರುಕುಳ (Sexual Harassment) ನೀಡಿದ್ದರು ಎಂದು ಬಾಲಕಿ ಹೇಳಿದರು. ನಂತರ, ಅವರು ಇದನ್ನು ನಿತ್ಯ ಅಭ್ಯಾಸ ಮಾಡಿಕೊಂಡರು ಎಂದು ದೂರುದಾರ ಬಾಲಕಿಯನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. 
ಹಾಗೂ, ಅತ್ಯಾಚಾರಕ್ಕೆ ಆಕೆ ವಿರೋಧಿಸಿದಾಗ, ಯಾರಿಗಾದರೂ ಹೇಳಿದರೆ ತನ್ನನ್ನು ಮತ್ತು ತಾಯಿಯನ್ನು ಜೀವಂತವಾಗಿ ಸುಡುವುದಾಗಿ ತಂದೆ ಬೆದರಿಕೆ ಹಾಕಿದರು ಎಂದೂ ಬಾಲಕಿ ದೂರು ನೀಡಿರುವ ಬಗ್ಗೆ ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆ ಈ ವಿಚಾರವನ್ನು ಯಾರಿಗೂ ಹೇಳಲಿಕ್ಕೆ ಸಾಧ್ಯವಾಗಲಿಲ್ಲ ಎಂದೂ ಬಾಲಕಿ ಹೇಳಿರುವ ಬಗ್ಗೆ ತಿಳಿದುಬಂದಿದೆ. ತನ್ನ ತಂದೆ ತನ್ನನ್ನು ಶೋಷಣೆ ಮಾಡುವುದನ್ನು ಮುಂದುವರೆಸಿದ್ದರಿಂದ ಅವಳು ತನ್ನ ಸಂಬಂಧಿಕರೊಬ್ಬರಿಗೆ ವಿಷಯವನ್ನು ಬಹಿರಂಗಪಡಿಸಿದಳು, ನಂತರ ಇತರ ಸಂಬಂಧಿಕರಿಗೂ ಈ ವಿಷಯ ತಿಳಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನು ಓದಿ: ಕೆಲಸದಾಕೆಗೆ ಚಿತ್ರಹಿಂಸೆ ನೀಡುತ್ತಿದ್ದ ಜಾರ್ಖಂಡ್‌ ಬಿಜೆಪಿ ನಾಯಕಿ ಬಂಧನ

ಬಳಿಕ ಶಾಲೆಯ ಪ್ರಾಂಶುಪಾಲರಿಗೆ ಘಟನೆ ತಿಳಿದಾಗ ಅವರು ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಕ್ಕಳ ಸಹಾಯವಾಣಿಯ ತಂಡ ಆಕೆಗೆ ಕೌನ್ಸೆಲಿಂಗ್ ಮಾಡಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯಿಂದ ದೂರು ಸ್ವೀಕರಿಸಿರುವುದಾಗಿ ಅಂಬಾಲಾ ಕಂಟೋನ್ಮೆಂಟ್‌ ಪೊಲೀಸ್ ಠಾಣೆಯ ಠಾಣಾಧಿಕಾರಿ (Station House Offcer) ನರೇಶ್ ಕುಮಾರ್ ತಿಳಿಸಿದ್ದಾರೆ. ಹಾಗೂ, ಬಾಲಕಿಯ ತಂದೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಅಂಬಾಲಾ ಕಂಟೋನ್ಮೆಂಟ್‌ನಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ (Civil Hospital) ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಆಕೆಯ ಹೇಳಿಕೆಯನ್ನು ಸಹ ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳಲಾಗುವುದು ಎಂದು ಹರ್ಯಾಣದ ಅಂಬಾಲಾ ಕಂಟೋನ್ಮೆಂಟ್‌ ಪೊಲೀಸ್ ಠಾಣೆಯ ಠಾಣಾಧಿಕಾರಿ ನರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. 

ಈ ಮಧ್ಯೆ, ಆರೋಪಿ ತಂದೆಯನ್ನು ಬಂಧಿಸುವ ಮೊದಲು ಬಾಲಕಿಯ ತಾಯಿಗೆ (Mother) ಈ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದು, ನಂತರ ಕೋರ್ಟ್‌ನಲ್ಲಿ (Court) ತಾಯಿ ಹೇಳಿಕೆಯನ್ನೂ ನ್ಯಾಯಾಧೀಶರ (Judge) ಎದುರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ, ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಮಂಗಳವಾರ ಕೋರ್ಟ್‌ ಎದುರು ಹಾಜರುಪಡಿಸಲಾಗಿದೆ. 

ಇದನ್ನೂ ಓದಿ: ಮೈಸೂರು: 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರ ಅಟ್ಟಹಾಸ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!