
ಕನಕಪುರ (ಜು. 08): 24 ವರ್ಷದ ಯುವಕ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕನಕಪುರ ತಾಲ್ಲೂಕಿನ (Kanakapura) ಮರಳವಾಡಿ ಹೋಬಳಿಯ ಗುಂಡನಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ ಹಾಗೂ ಸುರೇಶ್ ದಂಪತಿಯ ಪುತ್ರಿ ರಮ್ಯಾ (ಹೆಸರು ಬದಲಾಯಿಸಲಾಗಿದೆ) ಅತ್ಯಾಚಾರಕ್ಕೊಳಗಾದ ಬಾಲಕಿ. ಅದೇ ಗ್ರಾಮದ ಕಿರಣ್ (24) ವರ್ಷ ಅತ್ಯಾಚಾರವೆಸಗಿದ ಆರೋಪಿ.
ನಿನ್ನೆ ಸಂಜೆ ಮನೆಯಲ್ಲಿದ್ದ ಬಾಲಕಿಯನ್ನು ಹೊತ್ತೊಯ್ದು ಆರೋಪಿ ಅತ್ಯಚಾರ ಎಸಗಿದ್ದಾನೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದ ಪೋಷಕರು ಮಗಳು ಕಾಣದ ಹಿನ್ನಲೆ ಹುಡುಕಾಟ ನಡೆಸಿದ್ದರು. ಬಾಲಕಿಯನ್ನು ಹುಡುಕಲು ಹೋದಾಗ ಮನೆಯ ಹಿಂದೆ ಹೊಲದಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿ ಪೋಷಕರನ್ನು ನೋಡಿ ಅರೋಪಿ ಕಿರಣ್ ಎಸ್ಕೇಪ್ ಆಗಿದ್ದ. ಇಂದು ಬೆಳಿಗ್ಗೆ ಅರೋಪಿ ಕಿರಣ್ ನನ್ನ ವಶಕ್ಕೆ ಪಡೆದುಕೊಂಡಿರುವ ಹಾರೋಹಳ್ಳಿ ಪೋಲಿಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬುದ್ದಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ