
ಬೆಂಗಳೂರು (ಡಿ.26): ಎರಡೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಳ್ಳಾಲಸಂದ್ರದ ನಿವಾಸಿ ಮಲ್ಲಪ್ಪ (52) ಬಂಧಿತ ಆರೋಪಿ. ಮೂಲತಃ ಆಂಧ್ರಪ್ರದೇಶದ ಮಲ್ಲಪ್ಪ ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಕುಟುಂಬ ಜತೆ ಅಳ್ಳಾಲಸಂದ್ರದಲ್ಲಿ ನೆಲೆಸಿದ್ದಾನೆ. ಆರೋಪಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾನೆ.
ಎರಡೂವರೆ ವರ್ಷದ ಮಗುವಿನ ಪೋಷಕರು ಬಿಹಾರ ರಾಜ್ಯದವರಾಗಿದ್ದು, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಮನೆಗೆ ಸ್ವಲ್ಪ ದೂರದಲ್ಲೇ ಮಗುವಿನ ಮನೆ ಇದೆ. ಮಂಗಳವಾರ ಬೆಳಗ್ಗೆ 9ರ ಸುಮಾರಿಗೆ ಮಗು ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಆರೋಪಿ ಚಾಕೋಲೆಟ್ ಕೊಡಿಸುವ ಆಮಿಷವೊಡ್ಡಿ ಮಗುವನ್ನು ಕರೆದೊಯ್ದಿದ್ದ.
ಶೋಕಿಲಾಲ ತೋರಿಸಿದ್ದು ಅರಣ್ಯದಲ್ಲಿ ಹೂತಿಟ್ಟ 12 ಕೆಜಿ ಚಿನ್ನ!...
ಮಗುವನ್ನು ಹುಡುಕಿಕೊಂಡು ತಾಯಿ ಹೊರಗೆ ಬಂದಾಗ ಮಲ್ಲಪ್ಪ ಮಗು ಕರೆದೊಯ್ದಿರುವ ವಿಷಯ ತಿಳಿದಿದೆ. ಮಗುವಿನ ತಾಯಿ ಮಗುವನ್ನು ಕರೆ ತರಲು ಆತನ ಮನೆ ಬಳಿ ಹೋಗಿದ್ದರು. ಈ ವೇಳೆ ಆರೋಪಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವಾಗ ತಾಯಿಗೆ ಕೈಗೆ ಸಿಕ್ಕಿ ಬಿದ್ದಿದ್ದು, ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ಸಂಬಂಧ ಮಗುವಿನ ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ