ಬಿರಿಯಾನಿಗೆ ರಾಯಿತಾ ಕೇಳಿದ್ದಕ್ಕೆ ಥಳಿಸಿದ ಹೋಟೆಲ್‌ ಸಿಬ್ಬಂದಿ: ಕೆಲವೇ ಕ್ಷಣದಲ್ಲಿ ಗ್ರಾಹಕ ಸಾವು!

Published : Sep 11, 2023, 06:16 PM ISTUpdated : Sep 11, 2023, 06:22 PM IST
ಬಿರಿಯಾನಿಗೆ ರಾಯಿತಾ ಕೇಳಿದ್ದಕ್ಕೆ ಥಳಿಸಿದ ಹೋಟೆಲ್‌ ಸಿಬ್ಬಂದಿ: ಕೆಲವೇ ಕ್ಷಣದಲ್ಲಿ ಗ್ರಾಹಕ ಸಾವು!

ಸಾರಾಂಶ

ಬಿರಿಯಾನಿಗೆ ಎಕ್ಸ್ಟ್ರಾ ರಾಯಿತಾ ಕೇಳ್ದ ಅಂತ ಹೋಟೆಲ್‌ ಸಿಬ್ಬಂದಿ ಗ್ರಾಹಕನನ್ನು ಥಳಿಸಿದ್ದು, ಆತ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. 

ಹೈದರಾಬಾದ್‌ (ಸೆಪ್ಟೆಂಬರ್ 11, 2023): ಹೈದರಾಬಾದ್‌ನಲ್ಲಿ 32 ವರ್ಷದ ವ್ಯಕ್ತಿಯನ್ನು ಹೋಟೆಲ್‌ವೊಂದರಲ್ಲಿ ಅಲ್ಲಿನ ಸಿಬ್ಬಂದಿಯೇ ಹೊಡೆದು ಕೊಂದಿದ್ದಾರೆ. ಇದಕ್ಕೆ ಕಾರಣ ಆತ ಬಿರಿಯಾನಿಗೆ ಎಕ್ಸ್ಟ್ರಾ ರಾಯಿತಾ ಕೇಳ್ದ ಅಂತ. ಭಾನುವಾರ ರಾತ್ರಿ ಪುಂಜಗುಟ್ಟಾ ಪ್ರದೇಶದ ಮೆರಿಡಿಯನ್ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದೆ.
 
32 ವರ್ಷದ ವ್ಯಕ್ತಿ ಪ್ರಸಿದ್ಧ ಬಿರಿಯಾನಿ ಜಾಯಿಂಟ್‌ನಲ್ಲಿ ಹೆಚ್ಚುವರಿ ರಾಯಿತಾ ಅಂದರೆ ಬಿರಿಯಾನಿಯೊಂದಿಗೆ ಬಡಿಸುವ ಭಕ್ಷ್ಯ ಕೇಳಿದ್ದಕ್ಕೆ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾಹಕರು ಮತ್ತು ಹೋಟೆಲ್ ಸಿಬ್ಬಂದಿ ನಡುವೆ ವಾಗ್ವಾದ ನಡೆದು ಗ್ರಾಹಕನ ಸಾವಿಗೆ ಕಾರಣವಾಯಿತು. 

ಇದನ್ನು ಓದಿ: ವಿಮಾನದ ಲೈಟ್‌ ಆಫ್‌ ಆಗ್ತಿದ್ದಂತೆ ಮಹಿಳೆಗೆ ಲೈಂಗಿಕ ಕಿರುಕುಳ: ಅಸಭ್ಯವಾಗಿ ಮುಟ್ತಿದ್ದ ಕಾಮಪಿಶಾಚಿ

ಮೃತನನ್ನು ಲಿಯಾಕತ್ ಎಂದು ಗುರುತಿಸಲಾಗಿದ್ದು, ಸ್ನೇಹಿತರ ಗುಂಪಿನೊಂದಿಗೆ ರೆಸ್ಟೋರೆಂಟ್‌ನಲ್ಲಿದ್ದಾಗ, ಅತ ಸ್ವಲ್ಪ ಹೆಚ್ಚುವರಿ ರಾಯಿತಾ ಕೇಳಿದ ನಂತರ ಹೋಟೆಲ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದರು. ಈ ವಾದವು ಉಲ್ಬಣಗೊಂಡಿದ್ದು, ತ್ವರಿತವಾಗಿ ಹಿಂಸಾಚಾರಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ. 

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಎರಡೂ ಗುಂಪಿನ ವ್ಯಕ್ತಿಗಳು ಪರಸ್ಪರ ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ. ಹೋಟೆಲ್‌ನ ಮ್ಯಾನೇಜರ್ ಸೇರಿದಂತೆ ಹೋಟೆಲ್ ಸಿಬ್ಬಂದಿ ಲಿಕಾಯತ್‌ಗೆ ತೀವ್ರವಾಗಿ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ನಂತರ ಈ ವಾದ ವಿವಾದ ರಾತ್ರಿ 11 ಗಂಟೆ ಸುಮಾರಿಗೆ ಪಂಜಗುಟ್ಟ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಅಲ್ಲಿಯೇ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಯ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: AJIO ಬಳಕೆದಾರರೇ ಎಚ್ಚರ: ಅಂಬಾನಿ ಕಂಪನಿ ಹೆಸರಲ್ಲಿ ಇದೇನಿದು ದೊಡ್ಡ ಹಗರಣ?

ಆದರೂ, ಲಿಯಾಕತ್ ಅವರು ಪೊಲೀಸರನ್ನು ಸಮೀಪಿಸುತ್ತಿದ್ದಂತೆ ಉಸಿರಾಟ ಮತ್ತು ಎದೆ ನೋವು ಎಂದು ದೂರಿದರು ಮತ್ತು ಕೆಲವೇ ನಿಮಿಷಗಳಲ್ಲಿ ನೆಲದ ಮೇಲೆ ಕುಸಿದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಬಳಿಕ, ಪೊಲೀಸರು ಆತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದು ಹೃದಯ ಸ್ತಂಭನದ ಪ್ರಕರಣ ಎಂದು ವೈದ್ಯರು ಶಂಕಿಸಿದ್ದು, ಆದರೆ ವರದಿಗಳು ಹೊರಬಂದ ನಂತರ ವ್ಯಕ್ತಿಯ ಸಾವಿಗೆ ನಿಖರವಾದ ಕಾರಣವನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಲಾಗಿದೆ. ಈ ಮಧ್ಯೆ, ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ವರದಿಯಾಗಿದೆ.

ಇದನ್ನೂ ಓದಿ: 45 ಮಹಿಳೆಯರ ರೇಪ್; ಶಿಕ್ಷಕಿ ಜತೆ ರಾಸಲೀಲೆ: ಕಾಮುಕ ಪ್ರಿನ್ಸಿಪಾಲ್ ವಿಡಿಯೋ ವೈರಲ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!