ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಬಾಲಕಿಯ ಸಹೋದರ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಗಢದ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ.
ಲಖನೌ (ಮೇ 23, 2023): ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದೇ ರೀತಿ, ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲೂ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಆರೋಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಅಪ್ರಾಪ್ತ ಬಾಲಕಿಯ ಸಹೋದರ ಪ್ರಯತ್ನಿಸಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಬಾಲಕಿಯ ಸಹೋದರ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಗಢದ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಆರೋಪಿಗೆ ಚಾಕು ಹಾಕಲಾಗಿದ್ದು, ಈ ವೇಳೆ ದಾಳಿಗೊಳಗಾದ ಆರೋಪಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇನ್ನೊಂದೆಡೆ, ಚಾಕು ಹಾಕಿದ ಸಂತ್ರಸ್ತೆಯ ಸಹೋದರನನ್ನು ಸಹ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪೂರ್ವ) ವಿದ್ಯಾಸಾಗರ್ ಮಿಶ್ರಾ ಅವರು ಅತ್ಯಾಚಾರದ ಆರೋಪಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಲಾದ ಆರೋಪಿ ಅಟಲ್ ವಿಹಾರಿ (40) ಯನ್ನು ಜಿಲ್ಲಾ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ಇದನ್ನು ಓದಿ: ಛೀ ಪಾಪಿ: ಅಪ್ರಾಪ್ತ ಮಲಮಗಳ ಮೇಲೆ ಹಲವು ಬಾರಿ ಅತ್ಯಾಚಾರ; ಕೊನೆಗೂ ಜೈಲು ಪಾಲಾದ!
ಈ ವೇಳೆ ಬೆಳಗ್ಗೆ 10 ಗಂಟೆಯ ಸುಮಾರಿಗೆ ನ್ಯಾಯಾಲಯದ ಲಾಕಪ್‌ನಿಂದ ಆರೋಪಿಯನ್ನು ಪೊಲೀಸ್ ಕಸ್ಟಡಿಯಲ್ಲಿ ನ್ಯಾಯಾಲಯದ ಕೋಣೆಗೆ ಕರೆದೊಯ್ಯುತ್ತಿದ್ದಾಗ ದಾಳಿ ನಡೆಸಲಾಯಿತು ಎಂದು ಎಎಸ್ಪಿ ಪಿಟಿಐಗೆ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ
ಯುಪಿಯ ಪ್ರತಾಪ್‌ಗಢದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನೇ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಇಲ್ಲಿನ ಹಳ್ಳಿಯೊಂದರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಆತನ ಅಣ್ಣ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ.
ಇದನ್ನೂ ಓದಿ: ಉನ್ನಾವೋ ಗ್ಯಾಂಗ್‌ರೇಪ್ ಕೇಸ್ ಆರೋಪಿಗಳಿಗೆ ಜಾಮೀನು: ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿ ಆಕ್ರೋಶ
ಸಂಗೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಮೃತರನ್ನು ಜ್ಞಾನೇಂದ್ರ ತಿವಾರಿ (28) ಎಂದು ಗುರುತಿಸಲಾಗಿದೆ. ಪ್ರತಾಪ್‌ಗಢ ಪೊಲೀಸ್ ಠಾಣೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಜೂಹಿ ಶುಕ್ಲಾಪುರ್ ಗ್ರಾಮದ ನಿವಾಸಿ ಶೈಲೇಂದ್ರ ತಿವಾರಿ ಅಲಿಯಾಸ್ ಪರದೇಶಿ ಟೆರೇಸ್ ಮೇಲೆ ಮಲಗಿದ್ದ ತನ್ನ ಕಿರಿಯ ಸಹೋದರನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಸಂಗೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (ಎಸ್‌ಎಚ್‌ಒ) ಮನೋಜ್ ಕುಮಾರ್ ಯಾದವ್ ಹೇಳಿದ್ದಾರೆ.
ಕೂಗಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದಾಗ ಶೈಲೇಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಚಿಕ್ಕಪ್ಪನ ದೂರಿನ ಮೇರೆಗೆ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮನೋಜ್ ಕುಮಾರ್ ಯಾದವ್ ತಿಳಿಸಿದ್ದಾರೆ.
ಇದನ್ನೂ ಓದಿ: Crime: ಮೃಗದಂತೆ ಹೆತ್ತ ತಾಯಿ ಮೇಲೆ ಅತ್ಯಾಚಾರ ಮಾಡಿದ ಪಾಪಿ: ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ