ಗಂಗಾವತಿ: ಹೆರಿಗೆ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ

By Kannadaprabha News  |  First Published Apr 19, 2021, 1:49 PM IST

ಆಶಾ ಕಾರ್ಯಕರ್ತೆ ಮಲಗಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಯತ್ನ| ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ವೀಣಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದ ಘಟನೆ| ಕಾಮುಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನರು| ಈ ಸಂಬಂಧ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು


ಗಂಗಾವತಿ(ಏ.19): ಹೆರಿಗೆ ಬೇನೆ ಅನುಭವಿಸುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ತಂದೆಯೇ ಅಲ್ಲಿ ಆಶಾ ಕಾರ್ಯಕರ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಕನಕಗಿರಿ ತಾಲೂಕಿನ ಬಸರಿಹಾಳದ ಗರ್ಭಿಣಿ ರೇಷ್ಮಾ ಅವರ ತಂದೆ ಬಾಲಪ್ಪ ಈ ಕೃತ್ಯ ನಡೆಸಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ. 

ನಗರದ ವೀಣಾ ಹೆರಿಗೆ ಆಸ್ಪತ್ರೆಯಲ್ಲಿ ರೇಷ್ಮಾ ಅವರನ್ನು ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಗರ್ಭಿಣಿ ಜತೆ ಬಂದಿದ್ದ ಆಶಾ ಕಾರ್ಯಕರ್ತೆ ಮಲಗಿದ್ದ ಸಂದರ್ಭದಲ್ಲಿ ಬಾಲಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಕಾರ್ಯಕರ್ತೆ ಕೂಗಲು ಆರಂಭಿಸಿದಾಗ ಆಸ್ಪತ್ರೆಯಲ್ಲಿದ್ದ ಜನರು ಹಿಡಿದು ಥಳಿಸಿದ್ದಾರೆ.

Tap to resize

Latest Videos

ಪಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ಬಂದ ವಿಧವೆ ಮೇಲೆ ಗ್ಯಾಂಗ್ ರೇಪ್

ಈ ಸಂಬಂಧ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪಿ.ಐ. ವೆಂಕಟಸ್ವಾಮಿ ತಿಳಿಸಿದ್ದಾರೆ.
 

click me!