
ಬೆಂಗಳೂರು (ಏ.10): ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಕಳ್ಳತನ ಮಾಡಿದ ಎಂದು ವ್ಯಕ್ತಿಯನ್ನು ಕೋಣೆಯಲ್ಲಿ ಕೂಡಿಟ್ಟು ಹಲ್ಲೆ ನಡೆಸಲಾಗಿದೆ. ಒಂದು ವಾರ ರೂಂನಲ್ಲಿ ವ್ಯಕ್ತಿಯನ್ನು ಬಂಧಿಸಿಟ್ಟು ಮನಬಂದಂತೆ ಹಲ್ಲೆ ನಡೆಸಿದೆ. ಈ ಕಿರುಕುಳಕ್ಕೆ ತಾಳಲಾರದೆ ವ್ಯಕ್ತಿ ರೂಂನಲ್ಲೇ ಸಾವನ್ನಪ್ಪಿದ್ದಾನೆ. ಕೆ.ಜೆ.ಹಳ್ಳಿ ಬಳಿಯ ವೆಂಕಟೇಶಪುರದಲ್ಲಿ ಈ ಘಟನೆ ನಡೆದಿದ್ದು, ಸೈಫುಲ್ಲಾ (35) ಎಂಬಾತ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದಾನೆ.
ಹಲ್ಲೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿದು ದುಷ್ಕರ್ಮಿಗಳು ಈ ವಿಕೃತಿ ಮೆರೆದಿದ್ದಾರೆ. ಸೈಫುಲ್ಲಾ ವೆಂಕಟೇಶಪುರ ಗೋಡಾನ್ ನಲ್ಲಿ ಕಳ್ಳತನ ಮಾಡಿದ ಆರೋಪಕ್ಕೆ ಕೆಜಿ ಹಳ್ಳಿಯ ವೆಂಕಟೇಶಪುರಂ ರೂಂನಲ್ಲಿ ಕೂಡಿಟ್ಟು ಹಲ್ಲೆ ಮಾಡಲಾಗಿದೆ. ಒಂದು ವಾರ ಕೂಡಿಟ್ಟು ಹಲ್ಲೆ ಮಾಡಿದ್ದರಿಂದ ಸೈಫುಲ್ಲಾ ಕೊನೆಯುಸಿರೆಳೆದಿದ್ದಾನೆ. ಆತ ಮೃತಪಟ್ಟ ಬಳಿಕ ಶವವನ್ನ ಸಾದಹಳ್ಳಿ ಬ್ರಿಡ್ಜ್ ಮೋರಿಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಎಲೆಕ್ಷನ್ ಮೂಡ್‌ನಲ್ಲಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್‌ಗೆ ಕೇಸ್ ಜಡಿದು ಸ್ವಾಗತಿಸಿದ
ಬಳಿಕ ಶವ ಎಸೆದು ತಾವೇ ದೂರು ನೀಡಲು ಆರೋಪಿಗಳು ಮುಂದಾಗಿದ್ದಾರೆ. ಆರೋಪಿ ಜಬೀ ಇಂದ ಮಿಸ್ಸಿಂಗ್ ಕೇಸ್ ದಾಖಲಿಸಲು ಯತ್ನ ನಡೆದಿದೆ. ಈ ವೇಳೆ ಮೃತನ ತಾಯಿಯಿಂದಲೂ ದೂರು ದಾಖಲಾಗಿದೆ. ಈ ವೇಳೆ ಎರಡು ಒಂದೇ ಕೇಸ್ ಎಂಬುದು ಪೊಲೀಸರ ಗಮನಕ್ಕೆ ಬಂದಿದೆ. ಈ ವೇಳೆ ಜಬೀಯನ್ನ ರಾಮಮೂರ್ತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರಿಂದಲೇ ಆರೋಪಿ ಕಿಡ್ನಾಪ್, 40 ಲಕ್ಷಕ್ಕೆ ಡಿಮ್ಯಾಂಡ್: 17 ದಿನ ಕಳೆದ್ರೂ ಪತ್ತೆಯಾಗದ
ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದೆ. ಆರೋಪಿಗಳ ಮೊಬೈಲ್ ಪರಿಶೀಲನೆ ವೇಳೆ ಹಲ್ಲೆ ವಿಡಿಯೋಗಳು ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿ ಕೂಡಿಟ್ಟ ವಿಡಿಯೋಗಳು ಸಿಕ್ಕಿವೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಪ್ರಶಾಂತ್, ಜಬೀ, ಬಬನ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ತನಿಖೆ ಮುಂದುವರೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ