ಫೇಸ್‌ಬುಕ್‌ನಲ್ಲಿ ಹಿಂದೂ ಮಹಿಳೆಯೊಂದಿಗೆ ನಕಲಿ ಹೆಸರನ್ನು ಬಳಸಿ ಸ್ನೇಹ ಬೆಳೆಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ನಂತರ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾಳೆ. ಅಲ್ಲದೆ, ಮತಾಂತರವನ್ನೂ ಮಾಡಿದ್ದಾರೆ.
ಬೆಂಗಳೂರು (ಜುಲೈ 24, 2023) : ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ ಎಂಬ ಆರೋಪಗಳು ಆಗಾಗ್ಗೆ ಕಳಿಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಅಥವಾ ಅನುಮಾನ ಮೂಡುವಂತಹ ನಾನಾ ಪ್ರಕರಣಗಳು ನಡೆಯುತ್ತಿರುತ್ತದೆ. ಇದೇ ರೀತಿ ಉತ್ತರ ಪ್ರದೇಶದಲ್ಲಿ ಮತ್ತೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ.
ಒಬ್ಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಹಿಂದೂ ಮಹಿಳೆಯೊಂದಿಗೆ ನಕಲಿ ಹೆಸರನ್ನು ಬಳಸಿ ಸ್ನೇಹ ಬೆಳೆಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ನಂತರ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ: ಕೇರಳ ಯುವತಿ ನಾಪತ್ತೆ: ಬಲವಂತದ ಮತಾಂತರ, ಮದುವೆ ಮಾಡಿರೋ ಆತಂಕ ವ್ಯಕ್ತಪಡಿಸಿದ ತಂದೆ
ಆರೋಪಿ ಫೇಸ್‌ಬುಕ್‌ನಲ್ಲಿ ನಕಲಿ ಹೆಸರು ಬಳಸಿ ವಂಚಿಸಿದ್ದಾನೆ. ಬಳಿಕ, ಭೇಟಿಯಾಗುವಂತೆ ಹೇಳಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿಯಾಗಿರುವ ಮಹಿಳೆ, ಈ ದೂರು ನೀಡಿದ್ದು, ನಂತರ ತಾನು ಗರ್ಭಿಣಿಯಾಗಿದ್ದೆ. ಆದರೆ, ಅತ ಗರ್ಭಪಾತಕ್ಕೆ ಒತ್ತಾಯಿಸಿದ್ದ. ಆ ವ್ಯಕ್ತಿಯ ಹೆಸರು ಖಾಲಿದ್ ಮತ್ತು ಅವನು ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿದ್ದಾನೆಂದು ಆಕೆ ಕಂಡುಕೊಂಡಳು ಎಂದೂ ಮಹಿಳೆ ಹೇಳಿದ್ದಾರೆ.
ತನ್ನ ಧರ್ಮಕ್ಕೆ ಮತಾಂತರಗೊಳ್ಳುವಂತೆ ಖಾಲಿದ್ ತನ್ನ ಮೇಲೆ ನಿರಂತರ ಒತ್ತಡ ಹೇರಲು ಆರಂಭಿಸಿದ್ದ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅಂತಿಮವಾಗಿ, ಅವರು ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿಗೆ ಕರೆದೊಯ್ದರು, ಅಲ್ಲಿ ಬಲವಂತದ ಮತಾಂತರ ನಡೆಯಿತು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಖಾಲಿದ್ ಪತ್ರಕರ್ತ ಎಂದು ಹೇಳಿಕೊಂಡಿದ್ದ ಎಂದೂ ಸಂತ್ರಸ್ತೆ ಮಹಿಳೆ ತಿಳಿಸಿದ್ದಾರೆ.
ಇದನ್ನೂ ಓದಿ: ಮತ್ತೊಂದು ಲವ್ ಜಿಹಾದ್ ಕೇಸ್: ಗರ್ಭಿಣಿಗೆ ಮತಾಂತರಕ್ಕೆ ಒತ್ತಾಯಿಸಿ ವಿಷ ಹಾಕಿ ಕೊಂದ ಪಾಪಿಗಳು!
ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಆರೋಪಿ ಖಾಲಿದ್ ವಿರುದ್ಧ ಐಪಿಸಿ ಸೆಕ್ಷನ್ 376, 313, 323, ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅವರು ವಿಜಯನಗರ ರೈಲು ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದೂ ತಿಳಿದುಬಂದಿದೆ.
ನಾಲ್ವರು ಹಿಂದೂಗಳನ್ನೇ ಮದ್ವೆಯಾಗಿರೋ ಲವ್‌ಜಿಹಾದಿಯಿಂದ ಮತ್ತೊಬ್ಳು ಹಿಂದೂ ಯುವತಿ ಕಿಡ್ನ್ಯಾಪ್
ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಅಲ್ಪಸಂಖ್ಯಾತ ವ್ಯಕ್ತಿಯೊಬ್ಬ ಈಗಾಗ್ಲೇ ಐವರು ಮಹಿಳೆಯರನ್ನು ಮದುವೆಯಾಗಿದ್ದರೂ ಇದೀಗ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಅಪಹರಿಸಿದ್ದಾರೆ ಎಂದೂ ತಿಳಿದುಬಂದಿದೆ. 19 ವರ್ಷದ ಹಿಂದೂ ಯವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದು, ಅದಕ್ಕೂ ಮೊದಲು ಆಕೆಯನ್ನು ಮತಾಂತರ ಮಾಡಿದ್ದಾನೆ ಎಂದೂ ತಿಳಿದುಬಂದಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಹಿಂದೂ ಧರ್ಮಕ್ಕೆ ಘರ್ ವಾಪಸಿಯಾದ 100 ಕ್ಕೂ ಹೆಚ್ಚು ಜನ..!
ರಶೀದ್ ಅವರ ಐವರು ಪತ್ನಿಯರಲ್ಲಿ ಒಬ್ಬರು ಮುಸ್ಲಿಂ ಆಗಿದ್ದರೆ, ಇತರರು ಹಿಂದೂಗಳು ಎಂಬುದು ಗಮನಾರ್ಹವಾಗಿದೆ. 19 ವರ್ಷದ ಯುವತಿ 4 ದಿನಗಳ ಹಿಂದೆ ತನ್ನ ತಾಯಿಯ ಸಂಬಂಧಿಕರ ಮನೆಗೆ ಹೋಗಿದ್ದವಳು ನಾಪತ್ತೆಯಾದ ಹಿನ್ನೆಲೆ ಈ ಪ್ರಕರಣ ಬೆಳಕಿಗೆ ಬಂದಿದೆ. ಈಕೆ, ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರ ವರದಿಯ ಬಗ್ಗೆ ಮಾಹಿತಿ ಪಡೆದ ಆರೋಪಿ ರಶೀದ್ ಪೋಷಕರಿಗೆ ಕರೆ ಮಾಡಿ ತನ್ನ ಇನ್ನೊಬ್ಬ ಮಗಳನ್ನೂ ಕರೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾನೆ ಎಂದೂ ತಿಳಿದುಬಂದಿದೆ. ಇನ್ನು, ಈ ಘಟನೆ ಬೆಳಕಿಗೆ ಬಂದ ನಂತರ ಸ್ವಾಮಿ ಯಶ್ವೀರ್ ಸಿಂಗ್ ಸೇರಿದಂತೆ ಸ್ಥಳೀಯ ಬಜರಂಗದಳ ಕಾರ್ಯಕರ್ತರೊಂದಿಗೆ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.
ಇದನ್ನೂ ಓದಿ: ನಾಲ್ವರು ಹಿಂದೂಗಳನ್ನೇ ಮದ್ವೆಯಾಗಿರೋ ಲವ್‌ಜಿಹಾದಿಯಿಂದ ಮತ್ತೊಬ್ಳು ಹಿಂದೂ ಯುವತಿ ಕಿಡ್ನ್ಯಾಪ್