
ನೋಯ್ಡಾ: ತಲೆಗೆ ಮಸಾಜ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಇಟ್ಟಿಗೆಯಿಂದ ಹೊಡೆದು ಕೊಂದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. 34 ವರ್ಷದ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ರೀನು ಅಕಾ ಪ್ರತಿಭಾ ಎಂದು ಗುರುತಿಸಲಾಗಿದೆ. ಪ್ರತಿಭಾ 36 ವರ್ಷದ ಹರೇಂದ್ರ ಗಿರಿಯನ್ನು ವಿವಾಹವಾಗಿದ್ದರು. ದಂಪತಿಗೆ ಎಂಟು, ಐದು ಮತ್ತು ಎರಡು ವರ್ಷದ ಮೂವರು ಹೆಣ್ಣು ಮಕ್ಕಳಿದ್ದಾರೆ. ಗಿರಿ ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸೆಕ್ಟರ್ 63 ಪೊಲೀಸ್ ಠಾಣೆಯ ಠಾಣಾಧಿಕಾರಿ ಅವಧೇಶ್ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಸೋಮವಾರ ರಾತ್ರಿ 10.30ರ ಸುಮಾರಿಗೆ ಕುಡಿದ ಅಮಲಿನಲ್ಲಿ ಗಿರಿ ಮನೆಗೆ ಬಂದು ಅಡುಗೆ ಮಾಡುತ್ತಿದ್ದ ರೀನುವಿಗೆ ತಲೆಗೆ ಮಸಾಜ್ ಮಾಡುವಂತೆ ಒತ್ತಡ ಹೇರಲು ಆರಂಭಿಸಿದನು. ಆಕೆ ನಿರಾಕರಿಸಿ ತನಗೆ ಸಮಯಾವಕಾಶ ನೀಡುವಂತೆ ಕೋರಿದಾಗ ಸಿಟ್ಟಿಗೆದ್ದ ಗಿರಿ, ಇಟ್ಟಿದ್ದ ಇಟ್ಟಿಗೆಯನ್ನು ಎತ್ತಿಕೊಂಡು ಹೊಡೆದಿದ್ದಾನೆ. ರೀನುವಿನ ಕಿರುಚಾಟ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದರು.
ಬೆಂಗಳೂರು: ಮದ್ಯ ಸೇವಿಸುವಾಗ ಜಗಳ, ಇಟ್ಟಿಗೆ ಎತ್ತಿಹಾಕಿ ಸೋದರ ಸಂಬಂಧಿ ಹತ್ಯೆ
ಮಹಿಳೆಯೊಬ್ಬರು ಗಾಯಗೊಂಡು ಬಿದ್ದಿದ್ದಾರೆ ಎಂಬುದನ್ನು ತಿಳಿದ ತಕ್ಷಣ ನಾವು ಸ್ಥಳಕ್ಕಾಗಮಿಸಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದೆವು. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದರು ಎಂದು ಛಜರ್ಸಿ ಪೊಲೀಸ್ ಹೊರಠಾಣೆ ಪ್ರಭಾರಿ ಸಬ್ ಇನ್ಸ್‌ಪೆಕ್ಟರ್ ದೇಶಪಾಲ್ ಸಿಂಗ್ ಹೇಳಿದ್ದಾರೆ.
ರೀನುವಿನ ತಲೆಗೆ ತೀವ್ರವಾದ ಗಾಯಗಳಾಗಿವೆ. ಬಹುಶಃ ಅದುವೇ ಅವಳ ಸಾವಿಗೆ ಕಾರಣವಾಗಿದೆ ಎನ್ನಲಾಗ್ತಿದೆ. ತನಿಖೆಯ ವೇಳೆ ಗಿರಿಗೆ ತನ್ನ ಮೂವರು ಹೆಣ್ಣುಮಕ್ಕಳು ಇಷ್ಟವಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದ್ದು, ಮಗನಿಲ್ಲ ಎಂಬ ಕಾರಣಕ್ಕೆ ರೀನು ಜತೆ ಆಗಾಗ್ಗೆ ಜಗಳವಾಡುತ್ತಿದ್ದ ಎಂದು ತಿಳಿದುಬಂದಿದೆ.
ತುಮಕೂರು: ಅಪ್ಪನಿಂದಲೇ ಮಗಳ ಮೇಲೆ ಅತ್ಯಾಚಾರ..!
'ಗಂಡ ಹೆಂಡತಿಯ ನಡುವಿನ ಸಂಬಂಧವು ಉತ್ತಮವಾಗಿರಲ್ಲಿಲ್ಲ. ಮಗನಿಲ್ಲದ ಕಾರಣ ಗಿರಿ, ರೀನು ಜೊತೆ ಆಗಾಗ ಜಗಳವಾಡುತ್ತಿದ್ದ, ಹಲ್ಲೆ ನಡೆಸುತ್ತಿದ್ದ' ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯ ಕುಟುಂಬದಿಂದ ದೂರು ಬಂದ ನಂತರ ಶಂಕಿತ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ