
ರಾಜಸ್ಥಾನ(ನ. 29) ಇದಕ್ಕಿಂತ ಕ್ರೂರ ಘಟನೆ ಇನ್ನೊಂದು ಇರಲಿಕ್ಕೆ ಸಾಧ್ಯವಿಲ್ಲ. ಸಿನಿಮಾದಲ್ಲಿ ಇಂಥ ದೃಶ್ಯಗಳನ್ನು ಕಂಡಿದ್ದು ಇರಬಹುದು. ರಾಜಸ್ಥಾನದ ಯುವಕನೊಬ್ಬನನ್ನು ಕ್ರೂರವಾಗಿ ಥಳಿಸಿ ಮಾನವನ ಮಲ ಸೇವನೆ ಮಾಡಲು ಒತ್ತಾಯ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕ್ರೂರ ಘಟನೆಯ ವಿಡಿಯೋ ಸಹ ಲಭ್ಯವಾಗಿದ್ದು ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯೊಬ್ಬಳಿಗೆ ಯುವಕ ಕಿರುಕುಳ ನೀಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಯುವಕನನ್ನು ಹಿಡಿದ ಗ್ರಾಮಸ್ಥರು ಥಳಿಸಿದ್ದು ಅಲ್ಲದೆ ಮಲ ತಿನ್ನು ಎಂದು ದಬಾಯಿಸಿದ್ದಾರೆ.
ಸೊಸೆ ಮೇಲೆ ಮಾವನಿಂದ ಅತ್ಯಾಚಾರ ಪ್ರಶ್ನೆ ಮಾಡಿದ್ದಕ್ಕೆ ಮಗನನ್ನೇ ಕೊಂದ
ಹಲ್ಲೆಗೊಳಗಾದ ಯುವಕನನ್ನು ದೀಪಕ್ ಕುಮಾರ್ ಎಂದು ಗುರುತಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡಿದ್ದಾರೆ. ಅನೇಕರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿಯೂ ಈ ಪ್ರಕರಣ ತುಂಬಾ ಚರ್ಚೆಯಾಗುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂಬ ಆರೋಪವೂ ಕೇಳಿಬಂದಿದ್ದು ತನಿಖೆ ಯಾವ ರೀತಿ ನಡೆಯಲಿದೆ ಎಂಬುದನ್ನು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ