
ಲುಧಿಯಾನ, (ನ.07): ಕಟ್ಟಿಕೊಂಡ ಹೆಂಡ್ತಿ ಸ್ನಾನ ಮಾಡುವ ವಿಡಿಯೋ, ಫೋಟೋಗಳನ್ನು ತೆಗೆದುಕೊಂಡ ಪತಿಯೊಬ್ಬ ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ.
ಪತಿ ಆಕೆಗೆ ಗೊತ್ತಾಗದಂತೆ ಬಾತ್ರೂಂನಲ್ಲಿ ಕ್ಯಾಮೆರಾ ಅಡಗಿಸಿಟ್ಟಿದ್ದಾನೆ. ನಂತರ ಅದರಲ್ಲಿ ಚಿತ್ರೀಕರಣವಾದ ವಿಡಿಯೋ, ಫೋಟೋಗಳನ್ನಿಟ್ಟುಕೊಂಡು ಆಕೆಗೆ ಹಣಕ್ಕಾಗಿ ಕಿರುಕುಳ ನೀಡಿದ್ದಾನೆ.
ಪ್ರಿಯಕರನ ಜೊತೆ ಬೆತ್ತಲಾದ ಮೂರು ಮಕ್ಕಳ ತಾಯಿ: ಬಳಿಕ ನಡೆದಿದ್ದು ಭಯಾನಕ..!
ಅಲ್ಲದೇ 20 ಲಕ್ಷ ರೂಪಾಯಿ ಕೊಡು, ಇಲ್ಲದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಇದರಿಂದ ಬೇಸತ್ತ ಪತ್ನಿ ತವರು ಮನೆಗೆ ಘಟನೆಯನ್ನು ತಂದೆ ತಾಯಿಗೆ ವಿವರಿಸಿದ್ದಾಳೆ. ಈ ವಿಚಾರವಾಗಿ ಮಹಿಳೆಯ ಕುಟುಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪತಿ ವಿರುದ್ಧ ಐಟಿ ಕಾಯ್ದೆ 2000 ರ ಸೆಕ್ಷನ್ 67 ಮತ್ತು 67-ಎ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ