ಕೊಲೆಗೈದ, ಹೆದರಿ ತಾನೂ ಆತ್ಮಹತ್ಯೆಗೆ ಶರಣಾದ

By Suvarna News  |  First Published Sep 22, 2020, 10:40 PM IST

ಕೊಲೆಗೈದು ವ್ಯಕ್ತಯೋರ್ವ ಹೆದರಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕ್ಷುಲಕ ಕಾರಣಕ್ಕೆ ಅರ್ಧಗಂಟೆಯೊಳಗೆ ಎರಡು ಜೀವಗಳು ಹೋಗಿವೆ. 


ಚಿಕ್ಕಮಗಳೂರು, (ಸೆ.22): ಕೊಲೆಗೈದ ಬಳಿಕ ಭಯಗೊಂಡು ತಾನೂ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಂಧರ್ವಗಿರಿ ಗ್ರಾಮದಲ್ಲಿ ನಡೆದಿದೆ. 

ಗಂಧರ್ವಗಿರಿ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಹಾಗೂ ಬಸಪ್ಪ ಎಂಬುವರು ಕೆಲಸ ಮಾಡಿಕೊಂಡು ತೋಟದ ಲೈನ್ ಮನೆಗಳಲ್ಲಿ ವಾಸವಿದ್ದರು. ಇಬ್ಬರೂ ಕೂಡ ಮೂಲತಃ ಮಂಗಳೂರಿನವರಾಗಿದ್ದು, ಇಲ್ಲೆ ಬದುಕು ಕಟ್ಟಿಕೊಂಡಿದ್ದರು. 

Tap to resize

Latest Videos

ವೃದ್ಧನ ಕತ್ತು ಕೊಯ್ದು ಕಾಲ್ಕಿತ್ತವರ ಬೆನ್ನಟ್ಟಿ ಹಿಡಿದು, ಥಳಿಸಿದ ಜನರು!

ಆದರೆ, ಇಬ್ಬರ ಮಧ್ಯೆ ಆಗಾಗ್ಗೆ ಕ್ಷುಲಕ ಕಾರಣಕ್ಕೆ ಗಲಾಟೆ ನಡೆಯುತ್ತಿತ್ತು. ಇಂದು ಬೆಳಗ್ಗೆ ನೀರು ತರಲು ಹೋದ ಕೃಷ್ಣಪ್ಪ ಹಾಗೂ ಕೆಲಸಕ್ಕೆ ಹೊರಟಿದ್ದ ಬಸಪ್ಪನ ಮಧ್ಯೆ ಗಲಾಟೆ ನಡೆದಿದೆ. 

 ಇಬ್ಬರ ಮಧ್ಯೆ ನೀರಿನ ಬಾವಿ ಬಳಿ ಏನು ನಡೆಯಿತೆಂದು ಯಾರಿಗೂ ಗೊತ್ತಿಲ್ಲ. ಕೆಲಸಕ್ಕೆ ಹೊರಟಿದ್ದ ಬಸಪ್ಪ ಕೈಯಲ್ಲಿದ್ದ ಮಚ್ಚಿನಿಂದ ಕೃಷ್ಣಪ್ಪನ ಕುತ್ತಿಗೆಗೆ ಹೊಡೆದಿದ್ದಾನೆ. ತೀವ್ರವಾದ ರಕ್ತ ಸ್ರಾವದಿಂದ 45 ವರ್ಷದ ಕೃಷ್ಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಕೊಲೆಗೈದೆ ಎಂದು ಭಯಗೊಂಡ ಬಸಪ್ಪ ಕೆಲಸಕ್ಕೂ ಹೋಗದೆ ಮನೆಗೆ  ಹೋಗಿ ಕಳೆನಾಶಕ ಕುಡಿದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕ್ಷುಲಕ ಕಾರಣಕ್ಕೆ ಅರ್ಧಗಂಟೆಯೊಳಗೆ ಎರಡು ಜೀವಗಳು ಹೋಗಿವೆ. ಸ್ಥಳಕ್ಕೆ ಆಗಮಿಸಿದ ಮಲ್ಲಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

click me!