
ಗದಗ(ನ.07): ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್ ಬಳಿ ನಿನ್ನೆ(ಬುಧವಾರ) ನಡೆದಿದೆ.
ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ನಿನ್ನೆ ಮೂರು ವರ್ಷದ ವೇದಾಂತ್, ಇಂದು ಮಂಜುನಾಥ ಅರಕೇರ (40) ಹಾಗೂ ಧನ್ಯ (6), ಹಾಗೂ ಪವನ್ (4) ಮೃತ ದೇಹಗಳು ಪತ್ತೆಯಾಗಿವೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಣಿ ನೇಣು ಬಿಗಿದು ಆತ್ಮ*ತ್ಯೆ
ಮೃತದೇಹಗಳ ದೇಹಕ್ಕಾಗಿ ಮೀನುಗಾರರು ಹುಡುಕಾಟ ನಡೆಸಿದ್ದರು. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಈಜುತಜ್ಜರು, ಮೀನುಗಾರು ಕಾರ್ಯಾಚರಣೆ ನಡೆಸಿದ್ದರು. ಮಂಗಳವಾರ ಸಂಜೆ ಮಂಜುನಾಥ್ ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದರು.
ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದರು. ಹೆಂಡತಿಯ ಅಣ್ಣನ ಮಗ ವೇದಾಂತ ಸೇರಿದಂತೆ ತನ್ನ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಮೃತ ದೇಹಗಳನ್ನ ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮುಕ್ತಂಪುರ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತತರೆಲ್ಲರೂ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮಕ್ತಂಪುರ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ