ಕನಕಪುರದಲ್ಲಿ ಯುವಕನ ಬರ್ಬರ ಹತ್ಯೆ; ಕೆರೆಯಂಗಳದಲ್ಲೇ ರಕ್ತಸಿಕ್ತ ಅಂತ್ಯ!

Kannadaprabha News   | Kannada Prabha
Published : Oct 09, 2025, 09:28 AM IST
Bhadregowdana Doddi lake murder case

ಸಾರಾಂಶ

Kanakapura murder news: ಕನಕಪುರ ತಾಲೂಕಿನ ಭದ್ರೇಗೌಡನ ದೊಡ್ಡಿ ಕೆರೆಯಂಗಳದಲ್ಲಿ, ಈ ಹಿಂದೆ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಚಿರಂಜೀವಿ ಎಂಬ 25 ವರ್ಷದ ಯುವಕನನ್ನು ದುಷ್ಕರ್ಮಿಗಳು ಮಾರಕಾસ્ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. 

ಕನಕಪುರ (ಅ.9): ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರೇಗೌಡನ ದೊಡ್ಡಿ ಕೆರೆಯಂಗಳದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿ ಚಿರಂಜೀವಿ (25) ಈತ ಕೆಂಗೇರಿ ಹೋಬಳಿ ಹೆಮ್ಮಿಗೆಪುರ ಗ್ರಾಮದವನಾಗಿದ್ದು, ಈ ಹಿಂದೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಸ್ವಗ್ರಾಮ ತೊರೆದು ಪಿಚ್ಚನಕೆರೆ ಗ್ರಾಮದ ತನ್ನ ಹೆಂಡತಿ ತವರು ಮನೆಯಲ್ಲಿ ವಾಸಮಾಡಿಕೊಂಡು ಜೀವನ ಸಾಗಿಸುತ್ತಿದ್ದ, ಅ.07 ರ ಮಧ್ಯರಾತ್ರಿ ಸಮಯದಲ್ಲಿ ಯಾರೋ ದುಷ್ಕರ್ಮಿಗಳು ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಸಂದೇಶ: 11 ಮಂದಿ ದರ್ಶನ್ ಫ್ಯಾನ್ಸ್ ವಿರುದ್ಧ ಚಾರ್ಜ್‌ಶೀಟ್‌

ಕಳೆದ ಒಂದು ವಾರದ ಹಿಂದೆ ಭದ್ರೇಗೌಡನದೊಡ್ಡಿ ಗ್ರಾಮದ ಬಳಿ ಕುಡಿದು ಸ್ನೇಹಿತರೊಂದಿಗೆ ಗಲಾಟೆ ಮಾಡಿಕೊಂಡಿದ್ದು ಕೊಲೆಗೆ ಇದೇ ಕಾರಣ ಇರಬಹುದೆಂದು ಶಂಕಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್, ಅಪರ ಪೊಲೀಸ್ ಅಧೀಕ್ಷಕರಾದ ರಾಮಚಂದ್ರಪ್ಪ, ರಾಜೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಗ್ರಾಮಾಂತರ ವೃತ್ತ ನಿರೀಕ್ಷಕ ಎಸ್, ವಿಕಾಸ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ