
ಹೈದರಾಬಾದ್ ( ಆ. 19) ಇದಕ್ಕಿಂತ ಘೋರ ಕೃತ್ಯ ಇನ್ನೊಂದಿಲ್ಲ. ಮಲತಂದೆಯ ಲ್ಯಾಪ್ ಟಾಪ್ ತೆಗೆದು ನೋಡಿದಾಗ ಮಗಳು ಬೆಚ್ಚಿ ಬಿದ್ದಿದ್ದಾಳೆ. ಲ್ಯಾಪ್ ಟಾಪ್ ನಲ್ಲಿ ಆಕೆಯದ್ದೇ ಬೆತ್ತಲೆ ಚಿತ್ರಗಳು ಇದ್ದವು.
ಆರೋಪಿ ತಂದೆ 40 ವರ್ಷದ ರೆಸ್ಟೋರೆಂಟ್ ಮಾಲೀಕ ರಾಜೇಶ್. ಮಗಳು ಅಪ್ರಾಪ್ತೆಯಾಗಿದ್ದ ಸಮಯದಲ್ಲಿ ಆರೋಪಿ ನಗ್ನ ಚಿತ್ರಗಳನ್ನು ತೆಗೆದು ಲ್ಯಾಪ್ಟಾಪ್ನಲ್ಲಿ ಸೇವ್ ಮಾಡಿಟ್ಟುಕೊಂಡಿದ್ದು ಈಗ ಬಹಿರಂಗವಾಗಿದೆ.
ಸಂತ್ರಸ್ತೆಗೆ ಈಗ 20 ವರ್ಷ ವಯಸ್ಸಾಗಿದ್ದು, ಕಾನೂನು ವಿದ್ಯಾರ್ಥಿನಿಯಾಗಿರುವ ಆಕೆ ಜುಲೈನಲ್ಲಿ ಮಲ ತಂದೆಯ ಲ್ಯಾಪ್‌ಟಾಪ್ ಬಳಸುವಾಗ ತನ್ನದೇ ನಗ್ನ ಚಿತ್ರಗಳನ್ನು ನೋಡಿ ಬೆಚ್ಚಿಬಿದ್ದಿದ್ದಾಳೆ. ಫೋಟೋಗಳನ್ನು ತೆಗೆದಾಗ ಸಂತ್ರಸ್ತೆಗೆ 14 ಅಥವಾ 15 ವರ್ಷ ವಯಸ್ಸಾಗಿತ್ತು ಎಂದು ನಾಚಾರಾಮ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜೇಶ್ಗೆ ಸಂತ್ರಸ್ತೆ ಯುವತಿಯ ತಾಯಿ ಎರಡನೇ ಪತ್ನಿ. ಲ್ಯಾಪ್‌ಟಾಪ್ ಫೋಟೋಗಳಿರುವ ಬಗ್ಗೆ ಯುವತಿ ತನ್ನ ತಾಯಿಗೆ ತಿಳಿಸಿದ ನಂತ ಇಬ್ಬರು ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಆರೋಪಿಯನ್ನು ಈ ಮೊದಲೇ ಬಂಧಿಸಿದ್ದೆವು. ಆದರೆ, ಆತನಿಗೆ ಕರೊನಾ ವೈರಸ್ ಪಾಸಿಟಿವ್ ಇದ್ದ ಕಾರಣ ಗುಣಮುಖವಾದ ಬಳಿಕ ಆತನನ್ನು ಸೋಮವಾರ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ