ಕಲಬುರಗಿ: ವ್ಯಕ್ತಿಯನ್ನು ಅಪಹರಿಸಿ ಬರ್ಬರ ಕೊಲೆ

By Kannadaprabha News  |  First Published Jul 15, 2021, 2:35 PM IST

* ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ
* ಹಣದ ವಿಚಾರವಾಗಿ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ 
* ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು
 


ಕಲಬುರಗಿ(ಜು.15): ವ್ಯಕ್ತಿಯನ್ನು ಅಪಹರಿಸಿ, ಹತ್ಯೆಗೈದು ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿ ಹೋಗಿದ್ದ ಘಟನೆ ಜಿಲ್ಲೆಯ ಶಹಬಾದ್‌ ತಾಲೂಕಿನ ಮರ್ತೂರು ಬಳಿ ನಡೆದಿದೆ. ಚೆನ್ನಬಸಪ್ಪ ನಾಯ್ಕೋಡಿ(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. 

ಮೃತ ಚೆನ್ನಬಸಪ್ಪ ಜೇವರ್ಗಿ ತಾಲೂಕಿನ ಬಿಲ್ಲಾಡ್‌ ಗ್ರಾಮದ ನಿವಾಸಿಯಾಗಿದ್ದು, ಕಳೆದ ಶನಿವಾರ ಗ್ರಾಮದಿಂದ ನಾಪತ್ತೆಯಾಗಿದ್ದನು. ಬಳಿಕ ಭಾನುವಾರ ಅವರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಹಣದ ವಿಚಾರವಾಗಿ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. 

Tap to resize

Latest Videos

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಬಳಿ ಬಿಸಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ವಾಡಿ ರೈಲ್ವೆ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
 

click me!