* ಪ್ರಕರಣ ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳ ಬಂಧನ
* ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ನಡೆದ ಘಟನೆ
* ಬೈಕ್‌ನಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಚುಚ್ಚಿ, ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ
ಹಾವೇರಿ(ಆ.09): ಮಹಿಳೆಯೊಂದಿಗೆ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಪತಿಯೇ ಕೊಲೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದ ಉಮೇಶ ವಿರೂಪಾಕ್ಷಪ್ಪ ನಂದೆಣ್ಣನವರ (32) ಕೊಲೆಯಾಗಿರುವ ವ್ಯಕ್ತಿ. ಅದೇ ಗ್ರಾಮದ ಚನ್ನಬಸನಗೌಡ ಪಾಟೀಲ ಹಾಗೂ ಹಿರೇಬೆಂಡಿಗೇರಿ ಗ್ರಾಮದ ಶಂಕರಗೌಡ ಪಾಟೀಲ ಬಂಧಿತ ಆರೋಪಿಗಳು.
9ರ ಬಾಲಕಿ ಮೇಲೆ ಸ್ಮಶಾನದಲ್ಲಿ ಅತ್ಯಾಚಾರ, ಶವ ಸುಟ್ಟುಹಾಕಿ ಪ್ರಕರಣ ಮುಚ್ಚಿಹಾಕಲು ಯತ್ನ!
ಕೊಲೆಯಾದ ಉಮೇಶನು ಚನ್ನಬಸನಗೌಡನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಆ. 4ರಂದು ಬೈಕ್‌ನಲ್ಲಿ ಬರುತ್ತಿದ್ದಾಗ ಆರೋಪಿಗಳಿಬ್ಬರೂ ಸೇರಿ ಶಿಗ್ಗಾಂವಿ ತಾಲೂಕಿನ ಕೃಷಿ ನಗರದಿಂದ ಬಿಸೆಟ್ಟಿಕೊಪ್ಪಕ್ಕೆ ಹೋಗುವ ನಿರ್ಜನ ಪ್ರದೇಶದಲ್ಲಿ ಬೈಕ್‌ನಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಚುಚ್ಚಿ, ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಶವವನ್ನು ಕಾಲುವೆಯಲ್ಲಿ ಒಗೆದು ಹೋಗಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಭಾನುವಾರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಬೈಕ್, 15 ಸಾವಿರ ರು. ನಗದು, ಚಾಕು ವಶವಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.