
ನಂಜನಗೂಡು (ಮಾ.5): ಪತ್ನಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಪತಿ ರೈಲು ಬರೋದನ್ನ ಗಮನಿಸದೆ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಂಜನಗೂಡು ಬಳಿ ನಡೆದಿದೆ. ವಿಡಿಯೋ ಕಾಲ್ ವೇಳೆ ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕ ಬಿಹಾರ ಮೂಲದ ಮನುಕುಮಾರ್ (27) ಎಂದು ಗುರುತಿಸಲಾಗಿದೆ.
Rameshwaram Cafe Blast ಬೆನ್ನಲ್ಲೇ ಸಿಎಂ, ಡಿಸಿಎಂ ಸೇರಿ ರಾಜ್ಯ ಸರ್ಕಾರಕ್ಕೆ ಬಾಂಬ್ ಬೆದರಿಕೆ ಮೇಲ್!
ಈತ ದೊಡ್ಡಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಬೆಳಿಗ್ಗೆ 7:40 ಕ್ಕೆ ಪತ್ನಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನೋ ವೇಳೆ ಈ ಅವಘಡ ಸಂಭವಿಸಿದೆ. ರೈಲು ಚಾಮರಾಜನಗರ ಕಡೆಯಿಂದ ಮೈಸೂರಿಗೆ ಬರುತ್ತಿತ್ತು. ರೈಲು ಹಳಿ ಪಕ್ಕದಲ್ಲಿ ಕೂತು ಮಾತನಾಡುವಾಗ ಈ ಅವಘಡ ನಡೆದಿದೆ. ಸ್ಥಳಕ್ಕೆ ನಂಜನಗೂಡು ರೈಲ್ವೆ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ. ನಂಜನಗೂಡು ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ಶವ ರವಾನೆ ಮಾಡಲಾಗಿದ್ದು, ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸಂಚು, ಆರೋಪಿ ಅಜರ್ ಬಂಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ